ADVERTISEMENT

ಖಾಸಗಿ ಆಸ್ಪತ್ರೆಗಳಲ್ಲಿ ಶೇ 50 ಹಾಸಿಗೆ ಮೀಸಲಿಡಿ: ಡಿಸಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 11:02 IST
Last Updated 8 ಆಗಸ್ಟ್ 2020, 11:02 IST
ಪಿ.ಸುನೀಲ್‌ಕುಮಾರ್‌
ಪಿ.ಸುನೀಲ್‌ಕುಮಾರ್‌   

ವಿಜಯಪುರ:ಜಿಲ್ಲೆಯಲ್ಲಿ ಕೋವಿಡ್ ಹಿನ್ನೆಲೆಯಲ್ಲಿಖಾಸಗಿ ಆಸ್ಪತ್ರೆಗಳಲ್ಲಿ ಶೇ 50 ರಷ್ಟು ಹಾಸಿಗೆಗಳನ್ನು ಕಡ್ಡಾಯವಾಗಿ ಮೀಸಲಿಡುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ್ ಅವರು ಖಾಸಗಿ ವೈದ್ಯರಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಸುಮಾರು 11 ಆಸ್ಪತ್ರೆಯವರು ಕೂಡಿಕೊಂಡು ಒಟ್ಟು 400 ಹಾಸಿಗೆಗಳನ್ನು ಮೀಸಲಿಟ್ಟಿದ್ದು ಶ್ಲಾಘನೀಯ ಎಂದರು.

ಅತೀ ಶೀಘ್ರದಲ್ಲೇ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಸಾಕಷ್ಟು ಪ್ರಮಾಣದಲ್ಲಿ ಮಾಡಲಾಗುವುದು. 24X7 ವಾರ್‌ರೂಂ ಅನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

ADVERTISEMENT

ಜಿಲ್ಲಾ ಪಂಚಾಯ್ತಿ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಂದ್ರ ಕಾಪಸೆ ಸೇರಿದಂತೆ ಖಾಸಗಿ ಆಸ್ಪತ್ರೆಗಳ ವೈದ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.