ADVERTISEMENT

ವಿಜಯಪುರ: ಎತ್ತರದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 11:24 IST
Last Updated 17 ಆಗಸ್ಟ್ 2020, 11:24 IST
ಶ್ರೀಹರ್ಷ ಶೆಟ್ಟಿ
ಶ್ರೀಹರ್ಷ ಶೆಟ್ಟಿ   

ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1.5 ಅಡಿಗಿಂತ ಎತ್ತರದ ಗಜಾನನ ಮೂರ್ತಿಯನ್ನು ಮಾರಾಟ ಮಾಡುವಂತಿಲ್ಲ ಹಾಗೂ ಸಾರ್ವಜನಿಕರು ತಮ್ಮ ಮನೆಗಳಲ್ಲಿ 1.5 ಅಡಿಗಿಂತ ಎತ್ತರದ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ ಸೂಚಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಿವಿಧ ಗಜಾನನ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿ, ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಗಜಾನನ ಮೂರ್ತಿಯನ್ನು ಪ್ರತಿಷ್ಠಾಪಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.

ADVERTISEMENT

ಈ ತೀರ್ಮಾನಗಳನ್ನು ಸಾರ್ವಜನಿಕರು ಹಾಗೂ ಗಜಾನನ ಮೂರ್ತಿ ಮಾರಾಟಗಾರರು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಈ ತೀರ್ಮಾನವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪರಿಸರ ಸ್ನೇಹಿ ಜೇಡಿ ಮಣ್ಣಿನ ಗಜಾನನ ಮೂರ್ತಿಯನ್ನು ಪ್ರತಿಷ್ಠಾಪಿಸಲು ಅವಕಾಶವಿದೆ ಎಂದುಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.