ವಿಜಯಪುರ: ಜಿಲ್ಲೆಯಲ್ಲಿ ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಅಹಿತಕರ ಘಟನೆಗಳು ಆಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಎಂಟು ರೌಡಿಶೀಟರ್‌ಗಳನ್ನು ವಿವಿಧ ಜಿಲ್ಲೆಗಳಿಗೆ ಗಡೀಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಆದೇಶ ಹೊರಡಿಸಿದ್ದಾರೆ.
ರವಿ ಬಾಡಗಂಡಿ (ಒಂದು ವರ್ಷ, ಕಲಬುರಗಿ ಜಿಲ್ಲೆಯ ಸೇಡಂ ಪೊಲೀಸ್ ಠಾಣೆ ವ್ಯಾಪ್ತಿ), ಮಹಮ್ಮದ್ ಹನೀಫ್ ಬಾಗವಾನ್ (ಆರು ತಿಂಗಳು, ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿ), ರವಿ ನಂದಿ (ಆರು ತಿಂಗಳು, ಚಾಮರಾಜನಗರ ಜಿಲ್ಲೆಯ ಯಳಂದೂರು ಪೊಲೀಸ್ ಠಾಣೆ ವ್ಯಾಪ್ತಿ), ಮಹಮ್ಮದ್ ಸಾಜೀದ ಸತ್ತಾರ(ಆರು ತಿಂಗಳು, ಬೀದರ್ ಜಿಲ್ಲೆ ಬಾಲ್ಕಿ ಪೊಲೀಸ್ ಠಾಣೆ ವ್ಯಾಪ್ತಿ), ಜಮೀರ್ ಮುಲ್ಲಾ( ಮೂರು ತಿಂಗಳು, ಬಳ್ಳಾರಿ ಜಿಲ್ಲೆ ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿ), ಹಣಮಂತಪ್ಪ ಹಳ್ಳಿ (ಮೂರು ತಿಂಗಳು, ಧಾರವಾಡ ಜಿಲ್ಲೆ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿ), ಚೇತನ ಜತ್ತಿ (ಆರು ತಿಂಗಳು, ಕಲಬುರಗಿ ಜಿಲ್ಲೆ ಸುಲೇಪೇಟೆ ಪೊಲೀಸ್ ಠಾಣೆ) ಹಾಗೂ ಯಮನಪ್ಪ ಕಟ್ಟಿಮನಿ (ಆರು ತಿಂಗಳು, ಹಾವೇರಿ ಜಿಲ್ಲೆ ರಟ್ಟಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ)ಗೆ ಗಡೀಪಾರು ಮಾಡಲಾಗಿದೆ.
ಜಿಲ್ಲೆಯಲ್ಲಿ 1,212 ರೌಡಿಗಳಿದ್ದು, ಅದರಲ್ಲಿ ಕೊಲೆ, ಕೊಲೆಗೆ ಯತ್ನ, ದರೋಡೆ, ಕಳವು, ಆಯುಧ ಕಾಯ್ದೆ, ದೊಂಬಿ, ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ 27 ರೌಡಿಗಳ ಗಡೀಪಾರು ಮಾಡಲು ಉಪ ವಿಭಾಗಿಯ ದಂಡಾಧಿಕಾರಿಗೆ ಪ್ರಸ್ತಾವನೆಯನ್ನು ಸಲ್ಲಿಸಿದರು. ಇದರಲ್ಲಿ ಎಂಟು ರೌಡಿಗಳನ್ನು ಗಡೀಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಂಬರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.