ADVERTISEMENT

ಸೈನಿಕ ಶಾಲೆ; ಕಾರ್ಗಿಲ್ ವಿಜಯ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2021, 15:53 IST
Last Updated 26 ಜುಲೈ 2021, 15:53 IST
ವಿಜಯಪುರ ನಗರದ ಸೈನಿಕ ಶಾಲೆಯ ಆವರಣದಲ್ಲಿ ಸೋಮವಾರ ಕಾರ್ಗಿಲ್ ವಿಜಯ ದಿನಾಚರಣೆಯ 22ನೇ ವಾರ್ಷಿಕೋತ್ಸವದ ಅಂಗವಾಗಿ ಕಾರ್ಗಿಲ್ ಯುದ್ಧದ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದ ಸೈನಿಕರಿಗೆ ಪ್ರಾಂಶುಪಾಲರಾದ ಕ್ಯಾಪ್ಟನ್ (ಐಎನ್) ವಿನಯ್ ತಿವಾರಿ ಗೌರವ ಸಲ್ಲಿಸಿದರು
ವಿಜಯಪುರ ನಗರದ ಸೈನಿಕ ಶಾಲೆಯ ಆವರಣದಲ್ಲಿ ಸೋಮವಾರ ಕಾರ್ಗಿಲ್ ವಿಜಯ ದಿನಾಚರಣೆಯ 22ನೇ ವಾರ್ಷಿಕೋತ್ಸವದ ಅಂಗವಾಗಿ ಕಾರ್ಗಿಲ್ ಯುದ್ಧದ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದ ಸೈನಿಕರಿಗೆ ಪ್ರಾಂಶುಪಾಲರಾದ ಕ್ಯಾಪ್ಟನ್ (ಐಎನ್) ವಿನಯ್ ತಿವಾರಿ ಗೌರವ ಸಲ್ಲಿಸಿದರು   

ವಿಜಯಪುರ: ನಗರದ ಸೈನಿಕ್ ಶಾಲೆಯ ಆವರಣದಲ್ಲಿ ಕಾರ್ಗಿಲ್ ವಿಜಯದ22ನೇ ವಾರ್ಷಿಕೋತ್ಸವವನ್ನು ಸೋಮವಾರ ಆಚರಿಸಲಾಯಿತು.

ಕಾರ್ಗಿಲ್ ಯುದ್ಧದ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದ ಕೆಚ್ಚೆದೆಯ ಸೈನಿಕರಿಗೆ ಗೌರವಾರ್ಥವಾಗಿ ಪ್ರಾಂಶುಪಾಲರಾದ ಕ್ಯಾಪ್ಟನ್ (ಐಎನ್) ವಿನಯ್ ತಿವಾರಿ, ಎನ್‌ಸಿಸಿ ಅಧಿಕಾರಿಎಸ್‌.ಎಸ್‌. ಕೊಯ್,ಉಪ ಪ್ರಾಂಶುಪಾಲ ಲೆಫ್ಟಿನೆಂಟ್ ಸಿಡಿಆರ್ ರವಿಕಾಂತ್ ಶುಕ್ಲಾ ಅವರು ಮಾಲಾರ್ಪಣೆ ಮಾಡಿ, ಹುತಾತ್ಮರಿಗೆ ಗೌರವ ಸಲ್ಲಿಸಿದರು.

ಕಾರ್ಗಿಲ್ ವಿಜಯ್ ದಿವಸ್‌ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯ ಮತ್ತು ಪಾಕಿಸ್ತಾನದ ವಿರುದ್ಧದ ಅದ್ಭುತ ವಿಜಯ ಸ್ಮರಣೀಯ. 1999 ರ ಈ ದಿನದಂದು, ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಪ್ರದೇಶದಲ್ಲಿ ಸುಮಾರು ಮೂರು ತಿಂಗಳ ಕಾಲ ಹೋರಾಡಿದ ನಂತರ ಭಾರತವು ಕಾರ್ಗಿಲ್‌ ಮೇಲೆ ಯಶಸ್ವಿಯಾಗಿ ನಿಯಂತ್ರಣ ಪಡೆದುಕೊಂಡಿತು ಎಂದುಪ್ರಾಂಶುಪಾಲರಾದ ಕ್ಯಾಪ್ಟನ್ (ಐಎನ್) ವಿನಯ್ ತಿವಾರಿ ಹೇಳಿದರು.

ADVERTISEMENT

ಆಚರಣೆಯ ಅಂಗವಾಗಿ ‘ಕಾರ್ಗಿಲ್ ವಿಜಯ್ 1999 ಯುದ್ಧ’ ಎಂಬ ವಿಷಯದ ಕುರಿತು ಪೋಸ್ಟರ್ ತಯಾರಿಸುವ ಸ್ಪರ್ಧೆಯನ್ನು ನಡೆಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸ್ಪರ್ಧೆಗೆ ಕೆಡೆಟ್‌ಗಳಿಂದ ಉತ್ಸಾಹಭರಿತ ಪ್ರತಿಕ್ರಿಯೆ ವ್ಯಕ್ತವಾಯಿತು.

ಹುತಾತ್ಮರ ಗೌರವಾರ್ಥ ಸಂಕೇತವಾಗಿ ಎರಡು ನಿಮಿಷಗಳ ಮೌನ ಆಚರಿಸಲಾಯಿತು.ಜಿಲ್ಲೆಯ ಮಾಜಿ ಸೈನಿಕರು, ಸೈನಿಕ್ ಶಾಲೆಯ ಎನ್‌ಸಿಸಿಯ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.