
ಪ್ರಜಾವಾಣಿ ವಾರ್ತೆ
ಇಂಡಿ: ‘ಭಾರತವು ಸ್ವಾತಂತ್ರ್ಯ ಪಡೆದುಕೂಳ್ಳಲು ಅಡಚಣೆಗಳು ಎದುರಾದಂತೆಯೇ ಸ್ವತಂತ್ರ ಭಾರತದ ಎಲ್ಲ ಸಂಸ್ಥಾನಗಳನ್ನು ಒಟ್ಟುಗೂಡಿಸಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಇರುವ ತೊಡಕುಗಳ್ನೂ ನಿವಾರಿಸಿದವರು ಸರ್ದಾರ್ ವಲ್ಲಭಭಾಯ್ ಪಟೇಲರು’ ಎಂದು ಪ್ರಾಧ್ಯಾಪಕ ಸುರೇಂದ್ರ ಕೆ. ಅಭಿಪ್ರಾಯಪಟ್ಟರು.
ಪಟ್ಟಣದ ಜಿ.ಆರ್. ಗಾಂಧಿ ಕಲಾ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಏಕತಾ ದಿನ ಉದ್ಘಾಟಿಸಿ ಅವರು ಮಾತನಾಡಿದರು.
ಶಹರ ಪೊಲೀಸ್ ಕಚೇರಿಯ ವತಿಯಿಂದ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಎಂ.ಎಸ್.ತಳವಾರ ನಗದು ಬಹುಮಾನ ವಿತರಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಶ್ರೀಶೈಲ ಸಣ್ಣಕ್ಕಿ ಮಾತನಾಡಿದರು. ಪ್ರಾಧ್ಯಾಪಕ ಎಸ್.ಬಿ. ಜಾಧವ ನಿರೂಪಿಸಿದರು. ಪ್ರಾಧ್ಯಾಪಕ ಜಯಪ್ರಸಾದ ಡಿ. ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.