
ವಿಜಯಪುರ ಜಿಲ್ಲೆಯ ತಿಡಗುಂದಿ ಕಾಯಕ ಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೆಯ ಮಾನಸಗಂಗೋತ್ರಿ ಪ್ರತಿಷ್ಠಿತ ಮಾದರಿ ವಸತಿ ಶಾಲೆಯಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ
ವಿಜಯಪುರ: ರಾಜ ಮಹಾರಾಜರಿಗೆ ಮಾತ್ರ ಶಿಕ್ಷಣ ಇರಬೇಕು ಎನ್ನುವ ಮನಸ್ಥಿತಿ ಹೊಂದಿದ, ಪ್ರಜಾಪ್ರಭುತ್ವ ವ್ಯವಸ್ಥೆ ಇರದ ಸಂದರ್ಭದಲ್ಲಿ ಸಾಮಾನ್ಯ ಜನರಿಗೆ ಶಿಕ್ಷಣ ನೀಡಿದ ಸಾವಿತ್ರಿಬಾಯಿ ಹಾಗೂ ಜ್ಯೋತಿಬಾ ಪುಲೆ ದಂಪತಿ ಸಮಾಜಕ್ಕೆ ನೀಡಿದ ಕೊಡುಗೆ ಅತ್ಯಂತ ಶ್ಲಾಘನೀಯ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಕಾರ್ಯದರ್ಶಿ ಈ ಬಸವರಾಜು ವ್ಯಕ್ತಪಡಿಸಿದರು.
ತಿಡಗುಂದಿಯ ಕಾಯಕಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೆಯ ಮಾನಸಗಂಗೋತ್ರಿ ಪ್ರತಿಷ್ಠಿತ ಮಾದರಿ ವಸತಿ ಶಾಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕ ವತಿಯಿಂದ ಆಯೋಜಿಸಿದ ಜಿಲ್ಲಾಮಟ್ಟದ ಶೈಕ್ಷಣಿಕ ಸಮ್ಮೇಳನ ಹಾಗೂ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಸಮ ಸಮಾಜ ನಿರ್ಮಾಣ ಮಾಡುವಲ್ಲಿ,ಸಾಮಾಜಿಕ ಪರಿವರ್ತನೆಯಲ್ಲಿ ಶಿಕ್ಷಣದ ಮಹತ್ವ ಅತ್ಯಂತ ಪ್ರಮುಖವಾಗಿದೆ ಎಂದು ಪ್ರತಿಪಾದಿಸಿದ ದೇಶದ ಮೊದಲ ಶಿಕ್ಷಕಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಎಂದು ಉಪನ್ಯಾಸಕ ಅರ್ಜುನ ನಿಡಗುಂದೆ ಹೇಳಿದರು.
ಕಾಯಕ ಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸನಗೌಡ ಹರನಾಳ, ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ. ಪ್ರಭುಗೌಡ ಪಾಟೀಲ, ಕರ್ನಾಟಕ ರಾಜ್ಯ ಎಸ್ ಸಿ /ಎಸ್ ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಬಿ ಎಚ್ ನಾಡಗೀರ, ಕಾರ್ಯದರ್ಶಿ ಡಾ. ಸೂರ್ಯಕಾಂತ ಹೊಸಮನಿ ಮಾತನಾಡಿದರು.
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಧ್ಯಕ್ಷ ಜಿ ಎಸ್ ಕಾಂಬಳೆ ಸಮಿತಿಯ ಕಾರ್ಯಕ್ರಮದ ವಿವರಣೆ ನೀಡಿದರು. ಸುಜಾತ ಮಡ್ನಳ್ಳಿ ಸ್ವಾಗತಿಸಿದರು, ಜಯಮಾಲಾ ಪಾಟೀಲ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ರಮೇಶ ನಾಯಕ ವಂದಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಎ ಬಿ ಪಾವಲೆ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್ ಎಂ ಚೋಪಡೆ, ಹತ್ತಳ್ಳಿ ಪ್ರೌಢಶಾಲೆ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಶ್ರೀಮಂತ ಬಿರಾದಾರ, ಕೆಜೆವಿಎಸ್ ವಿಜಯಪುರ ಘಟಕದ ಸಹ ಕಾರ್ಯದರ್ಶಿ ಕಾಶಿಮಾಬಿ ನದಾಫ, ಖಜಾಂಚಿ ಎಸ್ ಬಿ ಗಜಾಕೋಶ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.