ADVERTISEMENT

ಪ್ರಮೋದ್‌ ಮುತಾಲಿಕ್‌ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 9:53 IST
Last Updated 7 ಜುಲೈ 2022, 9:53 IST
   

ಹೊಸಪೇಟೆ (ವಿಜಯನಗರ): ಜುಲೈ 13ರಂದು ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಸಂಘಟಿಸಲು ಉದ್ದೇಶಿಸಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅನುಮತಿ ನೀಡಬಾರದು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌.ಡಿ.ಪಿ.ಐ) ಆಗ್ರಹಿಸಿದೆ.

ಈ ಸಂಬಂಧ ಸಮಿತಿಯ ಮುಖಂಡರು ಗುರುವಾರ ನಗರದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹೇಶಬಾಬು ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಜು. 13ರಂದು ಗುರುಪೂರ್ಣಿಮೆಯ ದಿನ ಪ್ರಮೋದ್‌ ಮುತಾಲಿಕ್‌ ಅವರ ತುಲಾಭಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ಕಾರ್ಯಕ್ರಮದ ನೆಪದಲ್ಲಿ ಮುತಾಲಿಕ್‌ ಅವರು ಕೋಮು ಪ್ರಚೋದನಕಾರಿ ಭಾಷಣ ಮಾಡಬಹುದು. ಕೋಮು ಸೌಹಾರ್ದತೆಗೆ ಹೆಸರಾಗಿರುವ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಯಾಗಬಹುದು. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅವರ ಪ್ರವೇಶ ನಿರ್ಬಂಧಿಸಲಾಗಿದೆ. ಅದೇ ರೀತಿ ವಿಜಯನಗರ ಜಿಲ್ಲಾಡಳಿತವು ಅವರಿಗೆ ಜಿಲ್ಲೆಗೆ ಪ್ರವೇಶ ನೀಡಬಾರದು ಎಂದು ಆಗ್ರಹಿಸಿದರು.

ADVERTISEMENT

ಜು. 2ರಂದು ಹೊಸಪೇಟೆಯಲ್ಲಿ ಶ್ರೀರಾಮ ಸೇನೆಯವರಿಗೆ ಪ್ರತಿಭಟನೆಗಷ್ಟೇ ಅನುಮತಿ ನೀಡಲಾಗಿತ್ತು. ಆದರೆ, ಅವರು ಮಸೀದಿ, ಚರ್ಚ್‌ ಇರುವ ಸ್ಥಳದಿಂದ ಸ್ವಲ್ಪವೇ ದೂರದಲ್ಲಿ ಪೊಲೀಸರ ಗಮನಕ್ಕೆ ತರದೆ ವೇದಿಕೆ ನಿರ್ಮಿಸಿ, ವಾತಾವರಣ ಹದಗೆಡಿಸಲು ಪ್ರಯತ್ನಿಸಿದ್ದರು ಎಂದು ತಿಳಿಸಿದರು.
ಸಂಘಟನೆಯ ರಾಜ್ಯ ಸಮಿತಿ ಸದಸ್ಯ ಪ್ರೊ. ಗಯಾಸುದ್ದೀನ್‌, ಜಿಲ್ಲಾ ಅಧ್ಯಕ್ಷ ವಲಿ ಬಾಷಾ, ಜಿಲ್ಲಾ ಉಪಾಧ್ಯಕ್ಷ ನಜೀರ್ ಖಾನ್, ಜಿಲ್ಲಾ ಕಾರ್ಯದರ್ಶಿ ಇರ್ಫಾನ್ ಕಟಗಿ, ಜಿಲ್ಲಾ ಸಮಿತಿ ಸದಸ್ಯರಾದ ಇಬ್ರಾಹಿಂ ಬಳ್ಳಾರಿ,
ಸಲೀಂ ಬಾಷಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.