ADVERTISEMENT

ವಿಜಯಪುರ: ಶಿಕ್ಷಣ ತಜ್ಞ ಎಸ್.ಎ.ಪುಣೇಕರ ನಿಧನ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 18:08 IST
Last Updated 13 ಜನವರಿ 2026, 18:08 IST
ಎಸ್.ಎ.ಪುಣೇಕರ
ಎಸ್.ಎ.ಪುಣೇಕರ   

ವಿಜಯಪುರ: ವಿಜಯಪುರದ ಪ್ರತಿಷ್ಠಿತ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ಶಿಕ್ಷಣ ತಜ್ಞ ಎಸ್.ಎ. ಪುಣೇಕರ (90) ಮಂಗಳವಾರ ಇಲ್ಲಿ ನಿಧನರಾದರು. ಅವರಿಗೆ ಪತ್ನಿ, ನಾಲ್ವರು ಪುತ್ರರು, ಒಬ್ಬ ಪುತ್ರಿ ಇದ್ದಾರೆ.  

ಮಹಾರಾಷ್ಟ್ರದ ಪುಣೆಯಲ್ಲಿ ಸಿವಿಲ್ ಎಂಜಿನಿಯರಿಂಗ್ ಪದವಿ ಬಳಿಕ ಮುಂಬೈ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ವೃತ್ತಿಜೀವನ ಆರಂಭಿಸಿದರು. ನಂತರ ಮಧ್ಯಪ್ರದೇಶದಲ್ಲಿ ಬಿಲಾಹಿ ಉಕ್ಕುಸ್ಥಾವರದಲ್ಲಿ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸಿ, ಹೆಸರು ಮಾಡಿದ್ದರು.

1968ರಲ್ಲಿ ‘ಸರ್ಕಾರಿ ಮತ್ತು ಅರೆ ಸರ್ಕಾರಿ ಗೃಹ ನಿರ್ಮಾಣ ಸಹಕಾರಿ ಸಂಘ’ ಸ್ಥಾಪಿಸಿ  800ಕ್ಕೂ ಅಧಿಕ ಜನರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ನಿವೇಶನಗಳು ಸಿಗುವಂತೆ ಮಾಡಿದರು. 1969ರಲ್ಲಿ ವಿಜಯಪುರಕ್ಕೇ ಮರಳಿದ್ದು, ‘ಸಿಕ್ಯಾಬ್‌’ ಶಿಕ್ಷಣ ಸಂಸ್ಥೆ ಆರಂಭಿಸಿದರು. ಈಗ ಸಂಸ್ಥೆಯಡಿ 28ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಿವೆ. ಅಖಂಡ ವಿಜಯಪುರ ಜಿಲ್ಲೆಯಲ್ಲಿ ಮೊದಲ ಮಹಿಳಾ ಪದವಿ ಕಾಲೇಜು ಸ್ಥಾಪಿಸಿದರು. 

ADVERTISEMENT

ಪುಣೇಕರ ಅವರಿಗೆ ಅಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯವು ‘ಮೊಹಸೀನ್‌-ಎ-ಮಿಲ್ಲತ್’ ಪ್ರಶಸ್ತಿ (2019), ಅಸೋಸಿಯನ್ ಆಫ್ ಮುಸ್ಲಿಂ ಪ್ರೊಫೆಷನಲ್ ಮುಂಬೈ ನೀಡುವ ಜೀವಮಾನ ಸಾಧನೆ ಪ್ರಶಸ್ತಿ (2022), ಕಲಬುರಗಿಯ ಬಹುಮನಿ ಪ್ರತಿಷ್ಠಾನದ ಜೀವಮಾನ ಸಾಧನೆ ಪ್ರಶಸ್ತಿ (2023) ಲಭಿಸಿದೆ. ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.