ವಿಜಯಪುರ: ತಾಲ್ಲೂಕಿನ ಹೊನಗನಹಳ್ಳಿ ಬಳಿ ಮಂಗಮ್ಮಾಯಿ ದೇವಾಲಯದ ಬಳಿ ವಿಜಯಪುರ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಬುಧವಾರ ಸಂಜೆ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾರೆ.
ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಮತ್ತು ಬುಲೆರೊ ಜೀಪ್ ಮುಖಾಮುಖಿ ಡಿಕ್ಕಿಯಾಗಿದ್ದು, ಜೀಪ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತ ನಡೆದ ಸಂದರ್ಭದಲ್ಲೇ ಹಿಂದಿನಿಂದ ಬಂದ ಮಹಾರಾಷ್ಟ್ರದ ಎರ್ಟಿಗಾ ಕಾರೊಂದು ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ, ಸಾರಿಗೆ ಬಸ್ ಮತ್ತು ಕಾರು ಸೇರಿದಂತೆ ಮೂರು ವಾಹನಗಳು ನಜ್ಜುಗುಜ್ಜಾಗಿವೆ. ಅಪಘಾತದ ಕಾರಣಕ್ಕೆ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಕೆಲ ಹೊತ್ತು ವ್ಯತ್ಯಯವಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.