ADVERTISEMENT

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಕ್ಕೆ ಏಳನೇ ಸ್ಥಾನ

​ಪ್ರಜಾವಾಣಿ ವಾರ್ತೆ
Published 19 ಮೇ 2022, 14:51 IST
Last Updated 19 ಮೇ 2022, 14:51 IST
ವಿಜಯಪುರ ನಗರದಲ್ಲಿರುವ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ
ವಿಜಯಪುರ ನಗರದಲ್ಲಿರುವ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ   

ವಿಜಯಪುರ: ದೆಹಲಿಯ ಎಜುಕೇಷನ್ ವಲ್ರ್ಡ್ ಇಂಡಿಯಾ ಪ್ರೈ.ಲಿ. ನಡೆಸಿದ ದೇಶದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಸಮೀಕ್ಷೆಯಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಏಳನೇ ಸ್ಥಾನ ಪಡೆದುಕೊಂಡಿದೆ ಎಂದು ಉಪಕುಲಪತಿ ಡಾ.ಆರ್.ಎಸ್.ಮುಧೋಳ ತಿಳಿಸಿದ್ದಾರೆ.

ದೇಶದ ಪ್ರಮುಖ 300 ವಿವಿಧ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿರುವ ಮೂಲ ಸೌಕರ್ಯಗಳು, ಬೋಧನಾ ಪದ್ಧತಿ, ವಿಜ್ಞಾನ ಸಲಕರಣೆಗಳ, ಸಿಬ್ಬಂದಿ ವರ್ಗ, ಶಿಸ್ತು ಹೀಗೆ ಹತ್ತಾರು ವಿಷಯಗಳ ಕುರಿತು ಸಮೀಕ್ಷೆ ನಡೆಸಿತ್ತು. ನಂತರ ತಯಾರಿಸಿದ ಅತ್ಯುತ್ತಮ ವಿವಿಗಳ ಪಟ್ಟಿಯಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಗೆ ವೈದ್ಯಕೀಯ ಮತ್ತು ಜೀವವಿಜ್ಞಾನ ಕ್ಷೇತ್ರದಲ್ಲಿ 7ನೇ ಸ್ಥಾನ ದೊರಕಿರುವುದು ಸಂತಸ ತಂದಿದೆ ಎಂದರು.

ವಿವಿಗೆ ರಾಷ್ಟ್ರಮಟ್ಟದಲ್ಲಿ ಗೌರವ ದೊರಕಿರುವುದಕ್ಕೆ ಬಿ.ಎಲ್.ಡಿ.ಇ ಅಧ್ಯಕ್ಷ, ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಪತಿ ಎಂ.ಬಿ.ಪಾಟೀಲ ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.