ADVERTISEMENT

ಮೆಕ್ಕೆಜೋಳ ವಿಷಯವನ್ನು ಸಂಸತ್ತಿನಲ್ಲಿ ಪ್ರಶ್ನಿಸದ BJP ಸಂಸದರು: ಶಿವಾನಂದ ಪಾಟೀಲ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2025, 18:03 IST
Last Updated 2 ಡಿಸೆಂಬರ್ 2025, 18:03 IST
ಶಿವಾನಂದ ಪಾಟೀಲ
ಶಿವಾನಂದ ಪಾಟೀಲ   

ವಿಜಯಪುರ: ‘ಮೆಕ್ಕೆಜೋಳ ಖರೀದಿ ವಿಷಯವು ಕೇಂದ್ರ ಸರ್ಕಾರಕ್ಕೆ ಸಂಬಂಧಪಟ್ಟಿದ್ದು. ಸಂಸತ್ತಿನ ಅಧಿವೇಶನ ನಡೆದರೂ ರಾಜ್ಯದ ಬಿಜೆಪಿ ಸಂಸದರು ಮಾತನಾಡುತ್ತಿಲ್ಲ’ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆರೋಪಿಸಿದರು.

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,  ‘ಮೆಕ್ಕೆಜೋಳ ಖರೀದಿಗೆ ಸಂಬಂಧಿಸಿ ಸಂಸದ ಬಸವರಾಜ ಬೊಮ್ಮಾಯಿ ಅವರು ರೈತರ ಜೊತೆ ಪ್ರತಿಭಟಿಸುತ್ತಾರೆ. ಲೋಕಸಭೆಯಲ್ಲಿ ಏಕೆ ವಿಷಯ ಪ್ರಸ್ತಾಪಿಸುವುದಿಲ್ಲ’ ಎಂದು ಪ್ರಶ್ನಿಸಿದರು.

‘ರಾಜ್ಯದಲ್ಲಿ ಅತಿ ಹೆಚ್ಚು ಮೆಕ್ಕೆಜೋಳ ಉತ್ಪಾದನೆಯಾಗಿದೆ. ಇದೇ ವರ್ಷ ಅಕ್ಟೋಬರ್‌ನಲ್ಲೇ ಪತ್ರ ಬರೆದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಮಾತುಕತೆಗೂ ಕರೆದಿಲ್ಲ. ಮೆಕ್ಕೆಜೋಳ ಖರೀದಿ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಸೀಮಿತ ಅಧಿಕಾರವಿದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.