ವಿಜಯಪುರ: ನಗರದ ಹೊರವಲಯದ ಕೃಷಿ ವಿಜ್ಞಾನ ಕೇಂದ್ರದ ರೈತರ ವಸತಿನಿಲಯ ಕಟ್ಟಡದ ಉದ್ಘಾಟನಾ ಸಮಾರಂಭ ಕೃಷಿ ಮಹಾವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಮಾರ್ಚ್ 13ರಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.
‘ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಈ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ವಿಠ್ಠಲ ಕಟಕಗೊಂಡ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.