ADVERTISEMENT

ವಿಜಯಪುರ: ಲಿಖಿಂಪುರ ಹುತಾತ್ಮ ರೈತರಿಗೆ ಶ್ರದ್ಧಾಂಜಲಿ 

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2021, 11:49 IST
Last Updated 15 ಅಕ್ಟೋಬರ್ 2021, 11:49 IST
ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಜನಪರ ಸಂಘಟನೆಗಳ ಮುಖಂಡರು ಮೇಣದ ಬತ್ತಿ ಬೆಳಗಿಸುವುದರ ಮೂಲಕ ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು
ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಜನಪರ ಸಂಘಟನೆಗಳ ಮುಖಂಡರು ಮೇಣದ ಬತ್ತಿ ಬೆಳಗಿಸುವುದರ ಮೂಲಕ ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು   

ವಿಜಯಪುರ: ಉತ್ತರ ಪ್ರದೇಶದ ಲಖಿಂಪುರದಲ್ಲಿ ಕಾರು ಡಿಕ್ಕಿ ಹೊಡೆಸಿ ರೈತರನ್ನು ಕೊಲೆಗೈದ ಘಟನೆ ಖಂಡಿಸಿ ಹಾಗೂ ಹುತಾತ್ಮ ರೈತರಿಗೆನಗರದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಜನಪರ ಸಂಘಟನೆಗಳ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.

ಹುತಾತ್ಮರಾದ ನಾಲ್ಕು ಜನ ರೈತರು ಹಾಗೂ ಒಬ್ಬ ಪತ್ರಕರ್ತರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ ಮೇಣದ ಬತ್ತಿ ಹಚ್ಚಿ ದೀಪ ಬೆಳಗಿಸುವುದರ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ಹುತಾತ್ಮ ರೈತರಿಗೆ ನಮನಗಳು! ಹುತಾತ್ಮ ರೈತರು ಅಮರವಾಗಲಿ, ಅಮರವಾಗಲಿ! ಎಂಬ ಘೋಷಣೆ ಮೊಳಗಿಸಿದರು.

ADVERTISEMENT

ದೇಶದೆಲ್ಲೆಡೆ ಹೊರಾಟಗಾರರ ಮೇಲೆ ದಾಳಿ ನಡೆಸಿ ಕೊಲೆಗೈದು ಪ್ರಜಾತಂತ್ರವನ್ನೇ ಕಗ್ಗೊಲೆ ಮಾಡುತ್ತಿರುವ ಬಿಜೆಪಿಯ ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು.

ದೆಹಲಿ ಹೋರಾಟದಲ್ಲಿ ಸುಮಾರು 600ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಇದರಿಂದ ಹೋರಾಟಗಾರರ ಕೆಚ್ಚು ಹೆಚ್ಚಾಗಿದೆ. ಗೆಲ್ಲುವವರೆಗೂ ಹೋರಾಡಲು ಪ್ರತಿಜ್ಞೆ ಕೈಗೊಳ್ಳಬೇಕಾಗಿದೆ ಎಂದರು.

ರೈತ ಮುಖಂಡರಾದ ಭೀಮಶಿ ಕಲಾದಗಿ, ಭಿ. ಭಗವಾನ್ ರೆಡ್ಡಿ, ಬಾಳು ಜೇವೂರ, ಭೀಮರಾಯ ಪೂಜಾರಿ, ಪ್ರಗತಿಪರ ಸಂಘಟನೆಗಳ ವೇದಿಕೆಯ ಮುಖಂಡರಾದ ಸಿದ್ದಲಿಂಗ ಬಾಗೇವಾಡಿ, ಸದಾನಂದ ಮೋದಿ, ಸುರೇಖಾ ರಜಪೂತ, ಡಾ. ಗುರಿಕಾರ, ಭರತಕುಮಾರ, ಕಾವೇರಿ ರಜಪುತ, ಸುರೇಖಾ ಕಡಪಟ್ಟಿ, ದೀಪಾ ವಡ್ಡರ, ರಾಯಪ್ಪ ಗುಗದಡ್ಡಿ, ಅಮಸಿದ್ದಗೌಡ ಪಾಟೀಲ, ಬೀರಪ್ಪ ಬಿರಾದಾರ, ಮಹಾದೇವ ಲಿಗಾಡೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.