ADVERTISEMENT

ಜನೌಷಧ ಕೇಂದ್ರಗಳ ಸ್ಥಗಿತ ಖಂಡನೀಯ: ಸಂಸದ ರಮೇಶ ಜಿಗಜಿಣಗಿ

​ಪ್ರಜಾವಾಣಿ ವಾರ್ತೆ
Published 23 ಮೇ 2025, 14:07 IST
Last Updated 23 ಮೇ 2025, 14:07 IST
ರಮೇಶ ಜಿಗಜಿಣಗಿ
ರಮೇಶ ಜಿಗಜಿಣಗಿ   

ಚಡಚಣ: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಬಂದ್ ಮಾಡುವಂತೆ ಸರ್ಕಾರವು ಆದೇಶಿಸಿರುವುದು ಖಂಡನೀಯ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಆಯೋಜಿಸಲಾದ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿದರು.

ರಾಜ್ಯದ 200ಕ್ಕೂ ಅಧಿಕ ಜನೌಷಧ ಕೇಂದ್ರಗಳು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಘಟಕ, ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳ ಆವರಣಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಈ ಕೇಂದ್ರಗಳು ಸಾಮಾನ್ಯ ಬಡ ಜನತೆಗೆ ಅತ್ಯಂತ ರಿಯಾಯಿತಿ ದರಗಳಲ್ಲಿಔಷಧಗಳನ್ನು ಪೂರೈಕೆ ಮಾಡುತ್ತಿದ್ದವು. ಜನವಿರೋಧಿ ಸರ್ಕಾರದ ನೀತಿಯಿಂದಾಗಿ ಬಡ, ಮಧ್ಯಮ ವರ್ಗದ ಜನತೆಗೆ ಸಂಕಟ ತಂದೊಡ್ಡಿದೆ ಎಂದರು.

ADVERTISEMENT

ಕೂಡಲೇ ಈ ನಿರ್ಧಾರವನ್ನು ಮರು ಪರಿಶೀಲಿಸಿ, ಈ ಆದೇಶವನ್ನು ಹಿಂಪಡೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ರಾಜ್ಯದ ಆರೋಗ್ಯ ಸಚಿವ ದಿನೇಶ ಗುಂಡುರಾವ ಅವರಿಗೆ ಸಂಸದ ಜಿಗಜಿಣಗಿ ಒತ್ತಾಯಿಸಿದರು.

ಬಿಜೆಪಿ ಮಂಡಳ ಅಧ್ಯಕ್ಷ ಕಾಂತುಗೌಡ ಪಾಟೀಲ, ಮುಖಂಡ ಸಂಜೀವ ಐಹೊಳಿ, ಮಹೇಂದ್ರಕುಮಾರ ನಾಯಕ್‌, ಚಿದಾನಂದ ಚಲುವಾದಿ, ಮಲಗೊಂಡ ಪಾಟೀಲ, ಮಲ್ಲು ಧೋತ್ರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.