
ವಿಜಯಪುರ: ‘ಬದುಕು ಎಂದರೆ ಹೇಗಿರಬೇಕು ಎಂಬುದಕ್ಕೆ ಸಿದ್ಧೇಶ್ವರ ಸ್ವಾಮೀಜಿ ಜೀವನವೇ ನಿದರ್ಶನ’ ಎಂದು ವ್ಯಕ್ತಿತ್ವ ವಿಕಸನ ಮಾರ್ಗದರ್ಶಕ ಕ್ಯಾಪ್ಟನ್ ಆನಂದ ಹೇಳಿದರು.
ಚಾಣಕ್ಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಚಾಣಕ್ಯ ಕರಿಯರ್ ಅಕಾಡೆಮಿ ಸಂಯುಕ್ತ ಆಶ್ರಯದಲ್ಲಿ ಸಿದ್ಧೇಶ್ವರ ಸ್ವಾಮೀಜಿಯ ಗುರುನಮನ ಅಂಗವಾಗಿ ಈಚೆಗೆ ಏರ್ಪಡಿಸಿದ್ದ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ‘ಸಿದ್ಧೇಶ್ವರ ಸ್ವಾಮೀಜಿ ಅವರ ಪ್ರವಚನ ಸಾರವನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.
ಪ್ರೊ. ರಾಜಕುಮಾರ ಮಾಲಿಪಾಟೀಲ ಮಾತನಾಡಿ, ‘ಸಿದ್ಧೇಶ್ವರ ಸ್ವಾಮೀಜಿ ಕೇವಲ ಧಾರ್ಮಿಕತೆಗೆ ಮಾತ್ರ ಸಿಮೀತವಾಗದೆ ವಿವಿಧತೆಯಲ್ಲಿ ಬೆರೆತು ಅದನ್ನು ಸಾಕಾರಗೊಳಿಸುವ ಸಾಕಾರಮೂರ್ತಿಗಳಾಗಿದ್ದರು. ಯಾವುದೇ ವಿಚಾರವನ್ನು ಶ್ರೀಗಳು ವಾಸ್ತವಿಕ ನೆಲೆಗಟ್ಟಿನಲ್ಲಿ ಸೂಕ್ಷ್ಮವಾಗಿ ತಿಳಿಯಬಲ್ಲವರಾಗಿದ್ದರು. ಶ್ರೀಗಳ ಬದುಕಿನ ಮಾರ್ಗದಲ್ಲಿ ನಾವೆಲ್ಲರೂ ಬದುಕುತ್ತಿರುವುದು ಅವರ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಇಂತಹ ನುಡಿನಮನ ಕಾರ್ಯಕ್ರಮ ಅರ್ಥಪೂರ್ಣವಾಗುವುದು’ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಟಿ. ಮೇರವಾಡೆ ಮಾತನಾಡಿದರು. ಚಾಣಕ್ಯ ಪದವಿ ಮಹಾವಿದ್ಯಾಲಯದ ಸಂಸ್ಥಾಪಕ ಎನ್.ಎಂ. ಬಿರಾದಾರ, ಪ್ರೊ. ಗೌತಮಿ, ಪ್ರೊ. ಜಿ.ಎ. ಮೇಟಿ, ಪ್ರೊ. ರಮೇಶ ಚಲವಾದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.