
ಸಿಂದಗಿ: ‘ವೀರೇಂದ್ರ ಹೆಗ್ಗಡೆ ಅವರ ಆಶಯದಂತೆ ನಡೆಯುತ್ತಿರುವ ಮದ್ಯವರ್ಜನ ಶಿಬಿರದಲ್ಲಿರುವ ಶಿಬಿರಾರ್ಥಿಗಳಿಗೆ ಹೊಸ ಜೀವನ ಸಾಗಿಸಲು ಸುವರ್ಣಾವಕಾಶ ದೊರಕಿದೆ. ಸಮಾಜದ ಮುಖ್ಯವಾಹಿನಿಯಲ್ಲಿ ಪ್ರವೇಶ ಮಾಡಿ ಗೌರವಯುತವಾಗಿ ಬದುಕು ನಡೆಸಬೇಕು’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಇಲ್ಲಿಯ ಹೆಗ್ಗೇರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ನಡೆದ ಮದ್ಯವರ್ಜನ ಶಿಬಿರದಲ್ಲಿ ಮಾತನಾಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಕಲಬುರ್ಗಿ ಪ್ರಾದೇಶಿಕ ನಿರ್ದೇಶಕ ದಿನೇಶ ಪೂಜಾರಿ ಮಾತನಾಡಿ, ‘ರಾಜ್ಯದಾದ್ಯಂತ ನಡೆದಿರುವ 2022 ಮದ್ಯವರ್ಜನ ಶಿಬಿರಗಳಿಂದ ಇದುವರೆಗೆ 1.40 ಲಕ್ಷ ಜನ ಮದ್ಯವ್ಯಸನಮುಕ್ತ ಜೀವನ ಸಾಗಿಸುತ್ತಿದ್ದಾರೆ ಎಂದು ಹೇಳಿದರು.
ಬೋರಗಿ– ಪುರದಾಳ ಮಠದ ತಪೋರತ್ನಂ ಮಹಾಲಿಂಗೇಶ್ವರ ಸ್ವಾಮೀಜಿ 40 ಜನ ಶಿಬಿರಾರ್ಥಿಗಳಿಗೆ ಆಶೀರ್ವದಿಸಿದರು. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲಾದಪುರ, ಶಿಬಿರದ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿದರು.
ಹೆಗ್ಗೇರೇಶ್ವರ ದೇವಸ್ಥಾನ ಸಮಿತಿಯ ಕರೆಪ್ಪ ಪೂಜಾರಿ, ಜನಜಾಗೃತಿ ವೇದಿಕೆಯ ಕೃಷ್ಣರಾವ ಪಾಟೀಲ, ಆಕ್ಸಫರ್ಡ್ ಶಾಲೆಯ ಅಧ್ಯಕ್ಷ ಪ್ರಕಾಶ ಚೌಧರಿ, ಕನ್ನಡ ಸಾಹಿತ್ಯ ಪರಿಷತ್ತು ಶಾಖೆ ಅಧ್ಯಕ್ಷ ವೈ.ಸಿ.ಮಯೂರ, ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ, ಜೈತುಲ ಉಲುಮ್ ಎಜ್ಯುಕೇಶನ್ ಟ್ರಸ್ಟ್ ಕಾರ್ಯದರ್ಶಿ ಎಫ್.ಎಂ.ಗಿರಗಾಂವ, ಜನಜಾಗೃತಿ ಯೋಜನಾಧಿಕಾರಿ ರಾಜೇಶ, ವಿನಯ್ ಸಿ.ಬಿ, ಶಿಭಿರಾಧಿಕಾರಿ ದಿನೇಶ ಮರಾಠಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.