ADVERTISEMENT

ಸಿಂದಗಿ | ವಸತಿ ನಿಲಯಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 13 ಮೇ 2025, 15:30 IST
Last Updated 13 ಮೇ 2025, 15:30 IST

ಸಿಂದಗಿ: ಶ್ರೀಧರಸ್ವಾಮಿ ವಿದ್ಯಾವರ್ಧಕ ಸಂಘ ವಿಜಯಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದ ಸಿಂದಗಿ ಪಟ್ಟಣದ ಆರ್.ಡಿ.ಪಾಟೀಲ ಪಿಯು ಕಾಲೇಜು ಎದುರುಗಡೆ ಇರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಯಾವುದೇ ತರಗತಿಯಲ್ಲಿ ಓದುತ್ತಿರುವ ಗ್ರಾಮೀಣ ಬಾಲಕಿಯರಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿನಿಯರು ಹಿಂದಿನ ವರ್ಷ ಉತ್ತೀರ್ಣರಾದ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸ ಮಾಡುವ ಅಂತರದ ಪ್ರಮಾಣ ಪತ್ರ, ಆಧಾರ ಕಾರ್ಡ್, ಬಿಪಿಎಲ್ ಕಾರ್ಡ್ ಫೋಟೊ ಪ್ರತಿಯೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು 2025, ಜೂನ್ 15 ಕೊನೆಯ ದಿನ. ಮಾಹಿತಿಗಾಗಿ ಮೊ.ಸಂ. 97415 67545, 94487 52781 ಸಂಪರ್ಕಿಸಬಹುದು ಎಂದು ಸಂಸ್ಥೆಯ ಅಧ್ಯಕ್ಷ ಕೆ.ಎನ್.ಮೇಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.