ADVERTISEMENT

ಸಿಂದಗಿ ಸುಂದರವಾಗಿಸಲು ಸಂಕಲ್ಪ: ಶಾಸಕ ಅಶೋಕ ಮನಗೂಳಿ ಭರವಸೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 5:38 IST
Last Updated 12 ನವೆಂಬರ್ 2025, 5:38 IST
<div class="paragraphs"><p>ಸಿಂದಗಿ ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಮಂಗಳವಾರ ಶಾಸಕ ಅಶೋಕ ಮನಗೂಳಿ ಅವರು 5 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಗಲೀಕರಣ, ಬೀದಿದೀಪ ಕಾಮಗಾರಿ ಹಾಗೂ ರಾಷ್ಟ್ರೀಯ ಲಾಂಛನ ಸ್ಥಂಬವುಳ್ಳ ವೃತ್ತ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಇದ್ದಾರೆ.</p></div>

ಸಿಂದಗಿ ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಮಂಗಳವಾರ ಶಾಸಕ ಅಶೋಕ ಮನಗೂಳಿ ಅವರು 5 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಗಲೀಕರಣ, ಬೀದಿದೀಪ ಕಾಮಗಾರಿ ಹಾಗೂ ರಾಷ್ಟ್ರೀಯ ಲಾಂಛನ ಸ್ಥಂಬವುಳ್ಳ ವೃತ್ತ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಇದ್ದಾರೆ.

   

ಸಿಂದಗಿ: ‘ವಿಜಯಪುರ ಜಿಲ್ಲೆಯಲ್ಲಿಯೇ ಸಿಂದಗಿ ಪಟ್ಟಣವನ್ನು ಸೌಂದರ್ಯೀಕರಣ ಪಟ್ಟಣವನ್ನಾಗಿಸುವುದು ನನ್ನ ಸಂಕಲ್ಪವಾಗಿದೆ. ಈ ದಿಸೆಯಲ್ಲಿ ಎರಡೂವರೆ ವರ್ಷದ ಅವಧಿಯಲ್ಲಿ ಸರ್ಕಾರದಿಂದ ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು ಕಾರ್ಯ ಪ್ರವೃತ್ತನಾಗಿರುವೆ’ ಎಂದು ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.

ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಲೋಕೋಪಯೋಗಿ ಇಲಾಖೆಯಡಿ ₹5 ಕೋಟಿ ವೆಚ್ಚದಲ್ಲಿ ಆಲಮೇಲ ಮುಖ್ಯರಸ್ತೆಯ 18.39 ಕಿ.ಮೀದಿಂದ 19.50 ಕಿ.ಮೀವರೆಗೆ ರಸ್ತೆ ವಿಸ್ತರಣೆ ಹಾಗೂ ಬೀದಿದೀಪ ಅಳವಡಿಕೆ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ADVERTISEMENT

‘1994ರಲ್ಲಿ ಪಟ್ಟಣದಲ್ಲಿ ಅಂದಿನ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಅವರು ಮಹಾತ್ಮಗಾಂಧಿ ವೃತ್ತ ಸ್ಥಾಪಿಸಿ ಪುತ್ಥಳಿ ಅನಾವರಣಗೊಳಿಸಿದ್ದರು. ಈಗ ಈ ವೃತ್ತವನ್ನು ಸ್ಥಳಾಂತರಿಸಿ ಹತ್ತಿರದಲ್ಲಿಯೇ ಜ.26 ರಂದು ನೂತನ ವೃತ್ತ ಮತ್ತು ಬೃಹದಾಕಾರದ ಪುತ್ಥಳಿ ಅನಾವರಣಗೊಳಿಸಲಾಗುವುದು. ಈಗಿದ್ದ ವೃತ್ತದಲ್ಲಿ ರಾಷ್ಟ್ರೀಯ ಲಾಂಛನವುಳ್ಳ ಸ್ಥಂಬದ ವೃತ್ತ ನಿರ್ಮಾಣ ಮಾಡಲಾಗುವುದು’ ಎಂದು ತಿಳಿಸಿದರು.

‘ಚಿಕ್ಕಸಿಂದಗಿ ಬೈಪಾಸ್‌ದಿಂದ ಶಹಾಪುರ ಪೆಟ್ರೋಲ್ ಬಂಕ್ ವರೆಗೆ ರಸ್ತೆ ಹದಗೆಟ್ಟಿದ್ದರಿಂದ ಅದನ್ನು ₹4.60 ಕೋಟಿ ವೆಚ್ಚದಲ್ಲಿ ಸುಧಾರಣೆಗೊಳಿಸಲಾಗುವುದು. ಸ್ವಾಮಿ ವಿವೇಕಾನಂದ ವೃತ್ತದಿಂದ ತೋಂಟದ ಡಾ.ಸಿದ್ಧಲಿಂಗ ಶ್ರೀಗಳ ಮುಖ್ಯರಸ್ತೆ ಮಾರ್ಗವಾಗಿ ಟಿಪ್ಪು ಸುಲ್ತಾನ ವೃತ್ತದವರೆಗೆ ₹2.15 ಕೋಟಿ ವೆಚ್ಚದಲ್ಲಿ ಡಾಂಬರೀಕರಣ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ₹2 ಕೋಟಿ ವೆಚ್ಚದಲ್ಲಿ ಪಟ್ಟಣದ ಕೆರೆ ಅಭಿವೃದ್ಧಿಪಡಿಸಲಾಗುವುದು’ ಎಂದರು.

‘ಏಳು ವೃತ್ತಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಗೂ ಟ್ರಾಫಿಕ್ ಸಿಗ್ನಲ್ ಅಳವಡಿಸಲು ಈಗಾಗಲೇ ₹2 ಕೋಟಿ ಪ್ರಸ್ತಾವನೆಯಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇಲ್ಲಿಯ ಸರ್ಕಾರಿ ಆಸ್ಪತ್ರೆಗೆ ಶಾಸಕರ ಅನುದಾನ ₹45 ಲಕ್ಷ ವೆಚ್ಚದಲ್ಲಿ ಹೈಟೆಕ್ ಆಂಬುಲೆನ್ಸ್ ಶೀಘ್ರದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ’ ಎಂದು ವಿವರಿಸಿದರು.

ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ ಮಾತನಾಡಿ, ‘ಪಟ್ಟಣದಲ್ಲಿ ನಿರ್ಮಾಣಗೊಂಡ ವಿವಿಧ ಕಾಮಗಾರಿಗಳನ್ನು ಈ ವರೆಗೂ ಆಯಾ ಇಲಾಖೆಯವರು ಪುರಸಭೆ ಕಾರ್ಯಾಲಯಕ್ಕೆ ಹಸ್ತಾಂತರಿಸಿಲ್ಲ. ಕೂಡಲೇ ಹಸ್ತಾಂತರಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ರಾಷ್ಟ್ರೀಯ ಲಾಂಛನ ಸ್ಥಂಬದ ವೃತ್ತ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಹಣಮಂತ ಸುಣಗಾರ, ಎಂ.ಎ.ಖತೀಬ, ರಮೇಶ ಹೂಗಾರ, ಜಯಶ್ರೀ ಹದನೂರ, ಸುನಂದಾ ಯಂಪೂರೆ, ಮಹಾನಂದ ಬಮ್ಮಣ್ಣಿ, ಸರ್ಕಲ್ ಇನ್ಸಪೆಕ್ಟರ್ ನಾನಾಗೌಡ ಪೊಲೀಸ್ ಪಾಟೀಲ, ಸಾಯಬಣ್ಣ ಪುರದಾಳ, ಗುತ್ತಿಗೆದಾರ ಎಂ.ಬಿ.ಬೀಳಗಿ, ಲೋಕೋಪಯೋಗಿ ಇಲಾಖೆ ಎಇಇ ಅರುಣಕುಮಾರ ವಡಗೇರಿ, ಪುರಸಭೆ ಮುಖ್ಯಾಧಿಕಾರಿ ರಾಜಶೇಖರ ಎಸ್. ಇದ್ದರು.

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ಟ್ರಾಫಿಕ್ ಸಿಗ್ನಲ್ ಹಾಗೂ ಎಲ್ಲ ವೃತ್ತಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ತೀರ ಅಗತ್ಯ. ಈ ಹಿನ್ನೆಲೆಯಲ್ಲಿ ಸಿಂದಗಿ ಶಾಸಕರು ಈ ಕೆಲಸಗಳಿಗೆ ಅನುದಾನ ಒದಗಿಸುವ ಭರವಸೆ ನೀಡಿರುವುದು ಅಭಿನಂದನಾರ್ಹ
ಲಕ್ಷ್ಮಣ ನಿಂಬರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ