ADVERTISEMENT

ಮಕ್ಕಳ ಸಾಹಿತ್ಯ ಭೂಷಣ ಪ್ರಶಸ್ತಿಗೆ ಪ.ಗು.ಸಿದ್ದಾಪುರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 30 ಮೇ 2025, 13:57 IST
Last Updated 30 ಮೇ 2025, 13:57 IST
ಪ.ಗು. ಸಿದ್ದಾಪುರ
ಪ.ಗು. ಸಿದ್ದಾಪುರ   

ಸಿಂದಗಿ (ವಿಜಯಪುರ ಜಿಲ್ಲೆ): ಇಲ್ಲಿನ ವಿದ್ಯಾಚೇತನ ಪ್ರಕಾಶನ ನೀಡುವ 2025–26ನೇ ಸಾಲಿನ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಭೂಷಣ ಪ್ರಶಸ್ತಿಗೆ ಕೊಲ್ಹಾರ ತಾಲ್ಲೂಕಿನ ಮುಳವಾಡ ಗ್ರಾಮದ ಮಕ್ಕಳ ಸಾಹಿತಿ ಪ.ಗು. ಸಿದ್ದಾಪುರ ಆಯ್ಕೆಯಾಗಿದ್ದಾರೆ.

‘ಪ್ರಶಸ್ತಿ ₹15 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಜೂನ್ 11ರಂದು ಸಿಂದಗಿಯ ಸಾರಂಗಮಠದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ’ ಎಂದು ಪ್ರಕಾಶನದ ಮುಖ್ಯಸ್ಥ, ಮಕ್ಕಳ ಸಾಹಿತಿ ಹ.ಮ.ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT