ವಿಜಯಪುರ: ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಮಾಜಿ ಸಚಿವ, ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ವಿಜಯಪುರದಿಂದ ಅಂಬುಲೆನ್ಸ್ ಮೂಲಕ ಕಲಬುರ್ಗಿಗೆ ಸಾಗಿಸಿ, ಅಲ್ಲಿಂದ ಶನಿವಾರ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದೆ. ಸದ್ಯ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ ಎಂದು ಅವರ ಪುತ್ರ, ಸಿಂದಗಿ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.