ADVERTISEMENT

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆರೋಗ್ಯ ಕರುಣಿಸಲು ವಿಶೇಷ ಪೂಜೆ

ಶಂಕರಲಿಂಗ ದೇವಸ್ಥಾನದಲ್ಲಿ ಸಾಮೂಹಿಕ ಮಹಾಮೃತ್ಯುಂಜಯ ಮಂತ್ರ ಜಪ

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 12:33 IST
Last Updated 7 ಜನವರಿ 2022, 12:33 IST
ವಿಜಯಪುರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಶಂಕರಲಿಂಗ ದೇವಸ್ಥಾನದಲ್ಲಿ, ಪ್ರಧಾನಿ ನರೇಂದ್ರ ಮೋದಿಗೆ ದೇವರು ಆಯುರ್, ಆರೋಗ್ಯ ಕರುಣಿಸುವಂತೆ ವಿಶೇಷ ಪೂಜೆ ಸಲ್ಲಿಸಲಾಯಿತು.
ವಿಜಯಪುರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಶಂಕರಲಿಂಗ ದೇವಸ್ಥಾನದಲ್ಲಿ, ಪ್ರಧಾನಿ ನರೇಂದ್ರ ಮೋದಿಗೆ ದೇವರು ಆಯುರ್, ಆರೋಗ್ಯ ಕರುಣಿಸುವಂತೆ ವಿಶೇಷ ಪೂಜೆ ಸಲ್ಲಿಸಲಾಯಿತು.   

ವಿಜಯಪುರ: ಪ್ರಧಾನಿ ನರೇಂದ್ರ ಮೋದಿಗೆ ದೇವರು ಆಯುರ್, ಆರೋಗ್ಯ ಕರುಣಿಸುವಂತೆ ಬೇಡಿಕೊಂಡುಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಶಂಕರಲಿಂಗ ದೇವಸ್ಥಾನದಲ್ಲಿ ಸಾಮೂಹಿಕ ಮಹಾಮೃತ್ಯುಂಜಯ ಮಂತ್ರ ಜಪಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ಪ್ರವಾಸದ ವೇಳೆ ಭದ್ರತೆಯಲ್ಲಿ ಲೋಪವಾಗಿದ್ದು ಖಂಡನೀಯ. ದೇವರ ಕೃಪೆಯಿಂದ ಪ್ರಧಾನಮಂತ್ರಿ ಸುರಕ್ಷಿತವಾಗಿ ಮರಳುವಂತಾಯಿತು ಎಂದು ಅವರು ಹೇಳಿದರು.

ಪಂಜಾಬ್‌ ಕಾಂಗ್ರೆಸ್ ಸರ್ಕಾರ ಪ್ರಧಾನಮಂತ್ರಿಗಳ ಭದ್ರತೆಯಲ್ಲಿ ಉದ್ದೇಶಪೂರ್ವಕ ನಿರ್ಲಕ್ಷ್ಯ ವಹಿಸಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ಈ ಘಟನೆ ಇಡೀ ದೇಶ ಒಕ್ಕೊರಲಿನಿಂದ ಖಂಡಿಸುತ್ತಿದೆ. ಕೂಡಲೇ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ಪಂಜಾಬ್‌ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಆಗ್ರಹಿಸಿದರು.

ADVERTISEMENT

ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಬೀಜ ಮತ್ತು ಸಾವಯವ ಪ್ರಮಾಣ ನಿಗಮದ ಅಧ್ಯಕ್ಷ ವಿಜುಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗೂರ, ಭಾರತಿ ಭುಂಯ್ಯಾರ, ಗೀತಾ ಕುಗನೂರ, ಶಾಂತಾ ಉತ್ಲಾಸ್ಕರ, ರಜನಿ ಸಂಬಂಣ್ಣಿ, ಸುಮಂಗಲಾ ಕೋಟಿ, ಲಕ್ಷ್ಮಿ ಕನ್ನೊಳ್ಳಿ, ಮಲ್ಲಮ್ಮ ಜೋಗೂರ, ಸಂಜಯ ಪಾಟೀಲ ಕನಮಡಿ, ಮಳುಗೌಡ ಪಾಟೀಲ, ವಿಜಯ ಜೋಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.