ADVERTISEMENT

ವಿಜಯಪುರ: ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ- ಹರೀಶ. ಎ.

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 5:42 IST
Last Updated 27 ನವೆಂಬರ್ 2025, 5:42 IST
ವಿಜಯಪುರ ನಗರ ಹೊರವಲಯದ ಅರಕೇರಿಯ ಕರ್ನಾಟಕ ರಾಜ್ಯ ಪೊಲೀಸ್ ಇಂಡಿಯನ್‌ ರಿಸರ್ವ್ ಬಟಾಲಿಯನ್ ಕವಾಯತು ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ 2025ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಪ್ರಧಾನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಹರೀಶ. ಎ. ಚಾಲನೆ ನೀಡಿದರು.
ವಿಜಯಪುರ ನಗರ ಹೊರವಲಯದ ಅರಕೇರಿಯ ಕರ್ನಾಟಕ ರಾಜ್ಯ ಪೊಲೀಸ್ ಇಂಡಿಯನ್‌ ರಿಸರ್ವ್ ಬಟಾಲಿಯನ್ ಕವಾಯತು ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ 2025ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಪ್ರಧಾನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಹರೀಶ. ಎ. ಚಾಲನೆ ನೀಡಿದರು.   

ವಿಜಯಪುರ: ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿದ್ದು, ದೈನಂದಿನ ಜೀವನದಲ್ಲಿ ಆಟೋಟ ಮತ್ತು ಕ್ರೀಡೆಗಳಲ್ಲಿ ಸಕ್ರಿಯೆವಾಗಿ ತೊಡಗಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಹರೀಶ. ಎ. ಹೇಳಿದರು. 

ಕರ್ನಾಟಕ ರಾಜ್ಯ ಪೊಲೀಸ್ ಇಂಡಿಯಾ ರಿಸರ್ವ್ ಬಟಾಲಿಯನ್ ವಿಜಯಪುರ ಘಟಕದ ಕವಾಯತು ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ 2025ನೇ ಸಾಲಿನ ಅಂತರ್‌ ದಳಗಳ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ. ಇಂದಿನ ಒತ್ತಡದ ಜೀವನದಲ್ಲಿ ಕ್ರಿಯಾಶೀಲತೆಯನ್ನು ರೂಢಿಸಿಕೊಂಡು ಚಟುವಟಿಕೆಗಳಿಂದ ಇರಲು ಕ್ರೀಡೆಗಳು ಪೂರಕವಾಗಿ ಸ್ಫೂರ್ತಿ ನೀಡುತ್ತವೆ. ಇಲ್ಲಿ ಆಯೋಜಿಸಿರುವ ವಿವಿಧ ಕ್ರೀಡೆಗಳಲ್ಲಿ ಎಲ್ಲರೂ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆಯಬೇಕು. ಜೊತೆಗೆ ಉತ್ತಮ ಆರೋಗ್ಯ ತಮ್ಮದಾಗಿಸಿಕೊಳ್ಳಬೇಕು ಎಂದು ಹೇಳಿದರು. 

ADVERTISEMENT

ಕಮಾಂಡೆಂಟ್ ಪ್ರಸನ್ನಕುಮಾರ, ಡಾ.ರವೀಂದ್ರ ಚೌಧರಿ, ಡಾ.ಪ್ರಭುಗೌಡ ಪಾಟೀಲ್, ಡೆಪ್ಯೂಟಿ ಕಮಾಂಡೆಂಟ್ ಹೇಮಂತಕುಮಾರ ಹೆಗಡೆ, ನಂದಕುಮಾರ ಸಿಂಗದ, ಶರಣಬಸವ, ಸಹಾಯಕ ಕಮಾಂಡೆಂಟ್ ಲಕ್ಷ್ಮಣ ನಾಯಕ ಪೊಲೀಸ್ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.