ADVERTISEMENT

ಎಸ್ಎಸ್‌ಎಲ್‌ಸಿ ಭಾಷಾ ಪರೀಕ್ಷೆ: 326 ಗೈರು

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 16:21 IST
Last Updated 22 ಜುಲೈ 2021, 16:21 IST
ವಿಜಯಪುರ ನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದರು-ಪ್ರಜಾವಾಣಿ ಚಿತ್ರ
ವಿಜಯಪುರ ನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದರು-ಪ್ರಜಾವಾಣಿ ಚಿತ್ರ   

ವಿಜಯಪುರ: ಜಿಲ್ಲೆಯ 188 ಕೇಂದ್ರಗಳಲ್ಲಿಎಸ್‌ಎಸ್ಎಲ್‌ಸಿ ಭಾಷಾ ಪರೀಕ್ಷೆ ಯಾವುದೇ ತೊಂದರೆ, ಅಡಚಣೆ ಇಲ್ಲದೇ ಗುರುವಾರ ಯಶಸ್ವಿಯಾಗಿ ನಡೆದಿದ್ದು, ಪ್ರಸಕ್ತ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆ ಎರಡೇ ದಿನದಲ್ಲಿ ಮುಕ್ತಾಯವಾಗಿದೆ.

ಒಟ್ಟು ನೋಂದಾಯಿತ 37,583 ವಿದ್ಯಾರ್ಥಿಗಳ ಪೈಕಿ 37,257 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 168 ಬಾಲಕರು, 158 ಬಾಲಕಿಯರು ಸೇರಿದಂತೆ 326 ಪರೀಕ್ಷಾರ್ಥಿಗಳು ಗೈರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್‌.ವಿ.ಹೊಸೂರ ತಿಳಿಸಿದ್ದಾರೆ.

ಕೋವಿಡ್‌ ಭಯದ ನಡುವೆಯೇಎರಡು ದಿನಗಳ ಕಾಲ ಪರೀಕ್ಷೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದಿದೆ. ನಕಲು ನಡೆಯದಂತೆ ತಡೆಯಲು ಕ್ರಮಕೈಗೊಳ್ಳಲಾಗಿತ್ತು. ಅಲ್ಲದೇ, ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.