ADVERTISEMENT

ಮುದ್ದೇಬಿಹಾಳ: ವಿದ್ಯಾರ್ಥಿ ವಿರುದ್ಧ ಪ್ರಕರಣ, ಶಿಕ್ಷಕ ಅಮಾನತು

ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ನಾಲ್ವರು ಕರ್ತವ್ಯದಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2022, 20:22 IST
Last Updated 7 ಏಪ್ರಿಲ್ 2022, 20:22 IST

ಮುದ್ದೇಬಿಹಾಳ (ವಿಜಯಪುರ ಜಿಲ್ಲೆ): ತಾಲ್ಲೂಕಿನ ಢವಳಗಿ ಎಂ.ಬಿ.ಪಾಟೀಲ ಪ್ರೌಢಶಾಲೆಯಲ್ಲಿ ಬುಧವಾರ ಪರೀಕ್ಷೆ ಪ್ರಾರಂಭದ ನಂತರ ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯನ್ನು ಡಿಬಾರ್‌ ಮಾಡಲಾಗಿದ್ದು, ಆತನ ವಿರುದ್ಧ ಗುರುವಾರ ಪ್ರಕರಣ ದಾಖಲಿಸಲಾಗಿದೆ.

ಆ ವಿದ್ಯಾರ್ಥಿಯ ಪ್ರಶ್ನೆಪತ್ರಿಕೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡ ಅನಾಮಧೇಯ ವ್ಯಕ್ತಿಯ ವಿರುದ್ಧವೂ ಬಿಇಒ ಎಚ್.ಜಿ.ಮಿರ್ಜಿ ದೂರು ದಾಖಲಿಸಿದ್ದಾರೆ.

ಪ್ರಶ್ನೆಪತ್ರಿಕೆ ಬಹಿರಂಗಗೊಂಡ ಕೊಠಡಿಯ ಮೇಲ್ವಿಚಾರಕರಾಗಿದ್ದ ಮಡಿಕೇಶ್ವರ ಗ್ರಾಮದ ಖಾಸಗಿ ಅನುದಾನಿತ ಶಾಲೆಯ ಶಿಕ್ಷಕ ಬಿ.ಎಸ್.ಪೊಲೇಶಿ ಅವರನ್ನು ಅಮಾನತು ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.