ADVERTISEMENT

ಪತ್ರಕರ್ತರ ರಾಜ್ಯ ಸಮ್ಮೇಳನ: ಫೆ.4 ಮತ್ತು 5ಕ್ಕೆ ನಿಗದಿ

​ಪ್ರಜಾವಾಣಿ ವಾರ್ತೆ
Published 13 ಜನವರಿ 2023, 15:36 IST
Last Updated 13 ಜನವರಿ 2023, 15:36 IST
ವಿಜಯಪುರದಲ್ಲಿ ನಡೆಯಲಿರುವ ಪತ್ರಕರ್ತರ ರಾಜ್ಯ ಸಮ್ಮೇಳನದ ಉದ್ಘಾಟನೆಗೆ ಬರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರನ್ನು ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಭೇಟಿಯಾಗಿ, ಆಹ್ವಾನ ನೀಡಿದರು 

ವಿಜಯಪುರ: ವಿಜಯಪುರ ನಗರದಲ್ಲಿ ಫೆ. 4 ಮತ್ತು 5 ರಂದು 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮೇಳನ ಉದ್ಘಾಟನೆ ಮಾಡಲಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಸಮ್ಮೇಳನದ ಆತಿಥ್ಯ ವಹಿಸಿಕೊಂಡಿರುವ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿಯಾಗಿ ಸಮ್ಮೇಳನ ಉದ್ಘಾಟನೆಗೆ ಆಹ್ವಾನ ನೀಡಿದರು.

ಜ. 9 ಮತ್ತು 10 ರಂದು ನಡೆಯಬೇಕಿದ್ದ ಸಮ್ಮೇಳನವನ್ನು ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

ADVERTISEMENT

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ರಾಜ್ಯ ಸಮಿತಿ ಸದಸ್ಯ ಡಿ.ಬಿ. ವಡವಡಗಿ, ಸಹ ಖಜಾಂಚಿ ದೀಪಕ ಶಿಂತ್ರೆ, ಅಲ್ಲಮಪ್ರಭು ಮಲ್ಲಿಕಾರ್ಜುನಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.