
ತಾಳಿಕೋಟೆ: ಹಂಡೇ ವಜೀರ ಸಮಾಜದ ರಾಜ್ಯ, ಜಿಲ್ಲಾ ತಾಲ್ಲೂಕು, ಮಹಿಳಾ ಮತ್ತು ಯುವ ಘಟಕದ ಪದಾಧಿಕಾರಿಗಳ ಸಹಯೋಗದಲ್ಲಿ ಹಂಡೇವಜೀರ ಸಮಾಜ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಫೆ.1ರಂದು ಸ್ಥಳೀಯ ಖಾಸ್ಗತೇಶ್ವರ ಸಭಾಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಹಂಡೇವಜೀರ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಎಸ್.ಎಸ್.ಪಾಟೀಲ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಮಾರಂಭದಲ್ಲಿ 2024-2 5ನೆಯ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಕಳೆದ 10 ವರ್ಷಗಳಿಂದ ವಿವಿಧ ತಾಲ್ಲೂಕುಗಳಲ್ಲಿ ಸಮಾಜದ ಜಾಗೃತಿ ಮತ್ತು ಮಹಾಸಭಾಗಳನ್ನು ಮಾಡುತ್ತ ಬಂದಿದ್ದೇವೆ. ತಾಳಿಕೋಟೆ ಹೊಸ ತಾಲ್ಲೂಕು ರಚನೆಯಾದ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ ಎಂದರು.
ಸಮಾರಂಭದಲ್ಲಿ ಸಾನ್ನಿಧ್ಯವನ್ನು ಹಿರೂರು ಅನ್ನದಾನೇಶ್ವರ ಸಂಸ್ಥಾನಮಠದ ಪಟ್ಟಾಧಿಕಾರಿ ಜಯಗುರುಸಿದ್ದೇಶ್ವರ ಸ್ವಾಮೀಜಿ, ತಾಳಿಕೋಟೆಯ ಖಾಸ್ಗತೇಶ್ವರಮಠದ ಪೀಠಾಧಿಪತಿ ಸಿದ್ಧಲಿಂಗದೇವರು, ಕರಭಂಟನಾಳ ಹಿರೇಮಠದ ಶಿವಕುಮಾರ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ತಾಳಿಕೋಟೆ ತಾಲ್ಲೂಕು ಘಟಕದ ಅಧ್ಯಕ್ಷ ರಾಮನಗೌಡ ಬಿರಾದಾರ ವಹಿಸುವರು. ಉದ್ಘಾಟಕರಾಗಿ ಶಾಸಕ ಸಿ.ಎಸ್. ನಾಗಡೌಡ , ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ ಸಾಸನೂರ, ಪ್ರಮುಖರಾದ ಆರ್.ಎಸ್.ಪಾಟೀಲ ಕೂಚಬಾಳ, ಪ್ರಭು ದೇಸಾಯಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ತಿಳಿಸಿದರು.
ರಾಜ್ಯ ಉಪಾಧ್ಯಕ್ಷ ಎಸ್.ಜಿ.ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎಸ್.ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಕರಭಂಟನಾಳ, ರಾಮನಗೌಡ ಬಿರಾದಾರ ತಾಳಿಕೋಟೆ, ಎಂ.ಬಿ.ಬಿರಾದಾರ, ಸಿದ್ಧನಗೌಡ ಪಾಟೀಲ ಇದ್ದರು. ದೇವೀಂದ್ರ ಗೋನಾಳ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.