ADVERTISEMENT

ವಿಜಯಪುರ | ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ: ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 15:46 IST
Last Updated 22 ಸೆಪ್ಟೆಂಬರ್ 2025, 15:46 IST
   

ವಿಜಯಪುರ: ನಗರದ ಕೆಸ್‌ಆರ್‌ಟಿಸಿ ಕಾಲೊನಿಯಲ್ಲಿ ಸೋಮವಾರ ಸಂಜೆ ಬಾಲಕನೊಬ್ಬರ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿರುವ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಯಿ ಅನ್ವೇಶ ವನಹಳ್ಳಿ(5) ಬೀದಿ ನಾಯಿಗಳ ದಾಳಿಗೆ ಒಳಗಾಗಿರುವ ಬಾಲಕ ಎಂದು ಗುರುತಿಸಲಾಗಿದೆ. ನಾಯಿಗಳು ಕಚ್ಚಿರುವ ಪರಿಣಾಮ ಬಾಲಕನ ಕಾಲು, ಕುತ್ತಿಗೆಯಲ್ಲಿ ಆಳವಾದ ಗಾಯವಾಗಿವೆ. ನಾಯಿಗಳು ಮಾಂಸವನ್ನೇ ಕಿತ್ತುಕೊಂಡಿದ್ದು, ತೀವ್ರ ರಕ್ತಸ್ರಾವವಾಗಿದೆ.

ಈ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಅಧಿಕವಾಗಿರುವ ಬಗ್ಗೆ ಮಹಾನಗರ ಪಾಲಿಕೆ ಗಮನಕ್ಕೆ ತಂದರೂ ಅವುಗಳ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.