ADVERTISEMENT

ತಾಳಿಕೋಟೆ | ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 6:15 IST
Last Updated 12 ಜನವರಿ 2026, 6:15 IST
ತಾಳಿಕೋಟೆ ಪಟ್ಟಣದ ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ (ರಿ)ದ ತಾಲ್ಲೂಕು ಘಟಕದ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ದಿನವನ್ನು ಭಾನುವಾರ  ಆಚರಿಸಲಾಯಿತು
ತಾಳಿಕೋಟೆ ಪಟ್ಟಣದ ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ (ರಿ)ದ ತಾಲ್ಲೂಕು ಘಟಕದ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ದಿನವನ್ನು ಭಾನುವಾರ  ಆಚರಿಸಲಾಯಿತು   

ತಾಳಿಕೋಟೆ: ಪಟ್ಟಣದ ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ(ರಿ) ಇದರ ತಾಲ್ಲೂಕು ಘಟಕದ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ದಿನವನ್ನು ಭಾನುವಾರ ಆಚರಿಸಲಾಯಿತು.

ಪಟ್ಟಣದ ಪುರಸಭೆ ಹಳೆ ಕಾರ್ಯಾಲಯ ಆವರಣದಲ್ಲಿ ಹಮ್ಮಿಕೊಂಡ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೆಹಬೂಬ ಕುಳಗೇರಿ, ತಾಲ್ಲೂಕು ಶಾಖೆಯ ಅಧ್ಯಕ್ಷ ಜುಮ್ಮಣ್ಣ ನಾಲತವಾಡ ಮಾತನಾಡಿದರು. ಒಕ್ಕೂಟದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಡೇಸಾಬ.ಅ.ಚೌಧರಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಉಪಾಧ್ಯಕ್ಷ ಅಬ್ದುಲ್ ಲತೀಫ ಬೀಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ADVERTISEMENT

ಶಾಖೆಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ನಜೀರ್‌ ಅಹ್ಮದ್ ಚೋರಗಸ್ತಿ, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಆಸೀಫ್ ಕೆಂಭಾವಿ, ದಲಿತ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಗೋಪಾಲ ಕಟ್ಟಿಮನಿ, ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ, ಪದಾಧಿಕಾರಿಗಳು ಇದ್ದರು.