ADVERTISEMENT

ನೆರೆ ಪರಿಹಾರ ನೀಡದ್ದರೆ ಹೋರಾಟ: ಕಾಂಗ್ರೆಸ್‌ ಶಾಸಕ ಎಂ.ಬಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 11:35 IST
Last Updated 7 ಆಗಸ್ಟ್ 2022, 11:35 IST
ಎಂ.ಬಿ. ಪಾಟೀಲ
ಎಂ.ಬಿ. ಪಾಟೀಲ   

ವಿಜಯಪುರ: ಮಳೆ, ಪ್ರವಾಹದಿಂದ ತೊಂದರೆಗೆ ಈಡಾಗಿರುವ ವಿಜಯಪುರ ಜಿಲ್ಲೆಗೂ ತುರ್ತು ಪರಿಹಾರ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆಸಂತ್ರಸ್ತರೊಂದಿಗೆ ನಾನೇ ಬೀದಿಗಿಳಿಯಬೇಕಾಗುತ್ತದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಶಾಸಕ ಎಂ.ಬಿ.ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ನೆರೆ ಹಾವಳಿ ಮತ್ತು ಮುಂಗಾರು ಮಳೆಯಿಂದ ಜೀವ, ಜಾನುವಾರು, ಬೆಳೆ, ಮನೆ ಮತ್ತು ಸಾರ್ವಜನಿಕ ಮೂಲಸೌಲಭ್ಯ ಹಾನಿಯಾಗಿರುವ ಕುರಿತು ತುರ್ತು ಪರಿಹಾರ ನೀಡಲು ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ₹200 ಕೋಟಿ ಅನುದಾನ ಬಿಡುಗಡೆ ಮಾಡಿ, ವಿವಿಧ ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ. ಆದರೆ, ಇದರಲ್ಲಿ ವಿಜಯಪುರ ಜಿಲ್ಲೆಯನ್ನು ಕೈ ಬಿಟ್ಟಿರುವುದುಆಶ್ಚರ್ಯ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಗೆ ಅಭಿವೃದ್ಧಿ ಕಾರ್ಯಗಳ ಅನುದಾನ ಬಿಡುಗಡೆ ಮಾಡುವಲ್ಲಿ ಸದಾ ತಾರತಮ್ಯ ತೋರುತ್ತಿರುವ ಬಿಜೆಪಿ ಸರ್ಕಾರ, ಇದೀಗ ನೆರೆ ಹಾವಳಿಯಂತಹ ಗಂಭೀರ ವಿಷಯದಲ್ಲಿಯೂ ತಾರತಮ್ಯ ಮಾಡುವ ಮೂಲಕ ತಾವು ಲಜ್ಜೆಗೆಟ್ಟವರು ಎಂಬುದನ್ನು ತೋರಿಸಿದೆ ಎಂದು ಟೀಕಿಸಿದ್ದಾರೆ.

ADVERTISEMENT

ಮುಖ್ಯಮಂತ್ರಿ, ಈ ಭಾಗದ ಸಚಿವರಿಗೆ ಕಿಂಚಿತ್ತು ಮಾನ, ಮರ್ಯಾದೆ ಇದ್ದರೆ, ತಕ್ಷಣ ಜಿಲ್ಲೆಯಲ್ಲಿ ಮಳೆಯಿಂದ, ನೆರೆಯಿಂದ ಹಾನಿಯಾಗಿರುವ ಮಾಹಿತಿ ಪಡೆದು, ವಿಜಯಪುರ ಜಿಲ್ಲೆಗೂ ತುರ್ತು ಪರಿಹಾರ ಬಿಡುಗಡೆ ಮಾಡಿ, ತಮ್ಮ ಗೌರವ ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಸಂತ್ರಸ್ತರೊಂದಿಗೆನಾನೇ ಬೀದಿಗಿಳಿಯಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.