ADVERTISEMENT

ವಿಜಯಪುರಕ್ಕೆ ಎರಡು ವಸತಿ ನಿಲಯ ಮಂಜೂರು

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2025, 4:58 IST
Last Updated 30 ಅಕ್ಟೋಬರ್ 2025, 4:58 IST
ಎಂ.ಬಿ. ಪಾಟೀಲ
ಎಂ.ಬಿ. ಪಾಟೀಲ   

ವಿಜಯಪುರ: ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಅನುಕೂಲಕ್ಕೆಂದು ಜಿಲ್ಲೆಗೆ ಎರಡು ಮೆಟ್ರಿಕ್ ನಂತರದ ವಸತಿ ನಿಲಯಗಳು ಮಂಜೂರಾಗಿವೆ ಎಂದು ಜಿಲ್ಲಾ ಉಸ್ತುವಾರಿ‌ ಸಚಿವ ಎಂ.ಬಿ. ಪಾಟೀಲ‌ ತಿಳಿಸಿದರು.

‘ವಸತಿ ನಿಲಯ ಪ್ರಾರಂಭಿಸುವಂತೆ ನೂರಾರು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರು. ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಈಗ ರಾಜ್ಯದಲ್ಲಿ 62 ವಸತಿ ನಿಲಯ ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದ್ದು, ವಿಜಯಪುರ ಜಿಲ್ಲೆಗೆ ಎರಡು ಮಂಜೂರಾಗಿವೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT