ADVERTISEMENT

ವಿಜಯಪುರ: ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 6:16 IST
Last Updated 7 ಫೆಬ್ರುವರಿ 2022, 6:16 IST
ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು
ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು   

ವಿಜಯಪುರ: ಜಿಲ್ಲೆಯ ಇಂಡಿ ಪಟ್ಟಣದ ಎರಡು ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ವಿರೋಧಿಸಿ ಸೋಮವಾರ ಕೇಸರಿ ಶಾಲು ಧರಿಸಿ ತರಗತಿಗೆ ಹಾಜರಾಗಿದ್ದಾರೆ.

ಇಂಡಿ ಪಟ್ಟಣದ ಶಾಂತೇಶ್ವರ ‌ಪಿಯುಸಿ ಕಾಲೇಜು‌ ಹಾಗೂ ಜಿಆರ್‌ಬಿ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗೆ ಹಾಜರಾಗಿದ್ದಾರೆ.

ಈ ಸಂಬಂಧ ತುರ್ತು ಸಭೆ‌ ನಡೆಸಿದ ಎರಡೂ‌‌ ಕಾಲೇಜುಗಳ ಆಡಳಿತ ಮಂಡಳಿಗಳು ವಿವಾದ ಉಂಟಾಗಬಾರದು ಎಂಬ ಕಾರಣದಿಂದ ಕಾಲೇಜುಗಳಿಗೆ ರಜೆ‌ ಘೋಷಣೆ ಮಾಡಿದ್ದಾರೆ. ನಾಳೆಯಿಂದ ಸರ್ಕಾರ ಜಾರಿ ಮಾಡಿರೋ ಪ್ರಕಾರ ಸಮವಸ್ತ್ರ ಹಾಕಿಕೊಂಡು‌ ಬರುವಂತೆ ಸೂಚನೆ ನೀಡಿದ್ದಾರೆ.

ADVERTISEMENT

ಕಾಲೇಜುಗಳಿಗೆ‌ ರಜೆ ಘೋಷಿಸಿದ ಕಾರಣ ವಿದ್ಯಾರ್ಥಿಗಳು ಮನೆಗೆ ವಾಪಸ್ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.