ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ ಗ್ರಾಮದ ಬಳಿ ಇರುವ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ
ಯಂತ್ರಕ್ಕೆ ಸಿಲುಕಿ ದಿನಗೂಲಿ ಕೆಲಸಗಾರ ಸಿದ್ದಪ್ಪ ದೊಡಮನಿ (48) ಸಾವನಪ್ಪಿದ್ದಾರೆ.
ಮುದ್ದೇಬಿಹಾಳ ತಾಲ್ಲೂಕಿನ ಹಡಗಲಿ ಗ್ರಾಮದ ನಿವಾಸಿ ಸಿದ್ದಪ್ಪ ಸಾವಿಗೀಡಾದ ದಿನಗೂಲಿ ಕೆಲಸಗಾರ ಎಂದು ಗುರುತಿಸಲಾಗಿದೆ.
ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಸೂಕ್ತ ಸುರಕ್ಷತಾ ಕ್ರಮ ಇಲ್ಲದೇ ಇರುವುದು ಘಟನೆಗೆ ಕಾರಣ ಎಂದು ಕೆಲಸಗಾರರು ಆರೋಪಿಸಿದ್ದಾರೆ.
ಸಾವಿಗೀಡಾದ ದಿನಗೂಲಿ ನೌಕರನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಕಾರ್ಮಿಕರು ಒತ್ತಾಯಿಸಿದರು. ಮುದ್ದೇಬಿಹಾಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.