ADVERTISEMENT

ಪೂರೈಕೆಯಾಗದ ರೆಮ್‌ಡಿಸಿವಿರ್‌: ಎಂ.ಬಿ.ಪಾಟೀಲ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 8 ಮೇ 2021, 16:39 IST
Last Updated 8 ಮೇ 2021, 16:39 IST
ಎಂ.ಬಿ.ಪಾಟೀಲ
ಎಂ.ಬಿ.ಪಾಟೀಲ   

ವಿಜಯಪುರ: ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ದಾಖಲಾಗಿರುವಕೋವಿಡ್‌ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಅಗತ್ಯವಿರುವಷ್ಟು ರೆಮ್‌ಡಿಸಿವಿರ್‌ ಸರ್ಕಾರದಿಂದಪೂರೈಕೆಯಾಗದೇಇದರಿಂದ ಚಿಕಿತ್ಸೆ ನೀಡುವುದು ಕಷ್ಟವಾಗಿದೆ ಎಂದು ಸಂಸ್ಥೆ ಅಧ್ಯಕ್ಷರೂ ಆದ ಶಾಸಕ ಎಂ.ಬಿ.ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ಮಾಡಿರುವ ಅವರು, ಆಸ್ಪತ್ರೆಯಲ್ಲಿ300 ಆಕ್ಸಿಜನ್ ಬೆಡ್‌ಗಳು ಸೇರಿದಂತೆಒಟ್ಟು 500 ಬೆಡ್‌ಗಳನನ್ನು ಕೋವಿಡ್‌ ರೋಗಿಗಳ ಚಿಕಿತ್ಸೆ ನೀಡಲಾಗಿದೆ.ಸರ್ಕಾರ ನಿಗದಿ ಪಡಿಸಿದ ದರಕ್ಕಿಂತಕಡಿಮೆ ದರದಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ. ಆದರೆ, ಸರ್ಕಾರ ಆಸ್ಪತ್ರೆಗೆತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಶೀಘ್ರದಲ್ಲೇ ಕೊರೊನಾ ರೋಗಿಗಳಿಗೆ ಬೆಡ್ ಸಂಖ್ಯೆಯನ್ನು 700 ಕ್ಕೆ ಹೆಚ್ಚಿಸಲು ಉದ್ದೇಶಿಸಿದ್ದೇವೆ. ಆದರೆ, ನಮಗೆ ಸಾಕಷ್ಟು ಪ್ರಮಾಣದಲ್ಲಿ ರೆಮಿಡಿಸಿವಿರ್ ಪೂರೈಕೆಯಾಗುತ್ತಿಲ್ಲ. ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಹೇಳಿದ್ದಾರೆ.

ADVERTISEMENT

ಸರ್ಕಾರ ಈ ನಿಟ್ಟಿನಲ್ಲಿ ರಾಜಕೀಯ ಬಿಟ್ಟು, ಮಾನವೀಯತೆಯ ದೃಷ್ಠಿಯಿಂದ ಗಮನ ಹರಿಸಬೇಕು.ಮುಂದೆ ಅನಾಹುತವಾಗುವುದನ್ನು ತಪ್ಪಿಸಲು ಸರಕಾರ ನೆರವಿಗೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.