ADVERTISEMENT

ಸಾರಿಗೆ ನೌಕರರಿಗೆ ಸಿಹಿ ಹಂಚಿದ ವಿಜುಗೌಡ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 16:47 IST
Last Updated 15 ಏಪ್ರಿಲ್ 2021, 16:47 IST
ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಕರ್ತವ್ಯಕ್ಕೆ ಹಾಜರಾದ ಸಾರಿಗೆ ಸಿಬ್ಬಂದಿಗೆ ಯುಗಾದಿ ಹಬ್ಬದ ಸಿಹಿ ವಿತರಿಸಿದರು 
ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಕರ್ತವ್ಯಕ್ಕೆ ಹಾಜರಾದ ಸಾರಿಗೆ ಸಿಬ್ಬಂದಿಗೆ ಯುಗಾದಿ ಹಬ್ಬದ ಸಿಹಿ ವಿತರಿಸಿದರು    

ವಿಜಯಪುರ: ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಮುಷ್ಕರ ನಿರತ ಸಾರಿಗೆ ನೌಕರರನ್ನು ಭೇಟಿ, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು.

ಉಪ ಚುನಾವಣೆ ಬಳಿಕಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರುಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಕ್ರಮಕೈಗೊಳ್ಳಲಿದ್ದಾರೆ ಎಂದು ವಿಜುಗೌಡ ಪಾಟೀಲ ಭರವಸೆ ನೀಡಿದರು.

ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ, ಯುಗಾದಿ ಹಬ್ಬದ ಸಿಹಿಯನ್ನು ವಿತರಿಸಿದರು.

ADVERTISEMENT

ಚುನಾವಣಾ ಕಾರ್ಯಕ್ಕೆ224 ಬಸ್‌

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣಾ ಕಾರ್ಯಕ್ಕೆ ಜಿಲ್ಲೆಯಿಂದ ಗುರುವಾರ 224 ಬಸ್‌ಗಳನ್ನು ಕಳುಹಿಸಿಕೊಡಲಾಯಿತು. ಜಿಲ್ಲೆಯೊಳಗೆ ಸುಮಾರು 104 ಬಸ್‌ಗಳು ಕಾರ್ಯಾಚರಣೆ ನಡೆಸಿವೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಂಘದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.