
ಬಸವನಬಾಗೇವಾಡಿ: ಬೀಳಗಿಯಲ್ಲಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ, ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘ ಹಾಗೂ ಅನ್ನದಾತ ಸಹಕಾರಿ ಸಂಘಗಳ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 163ನೇ ಜಯಂತ್ಯುತ್ಸವ ಅಂಗವಾಗಿ ಹಮ್ಮಿಕೊಂಡಿದ್ದ 10ನೇ ವಿವೇಕ ಉತ್ಸವದಲ್ಲಿ ಬಸವನಬಾಗೇವಾಡಿ ತಾಲ್ಲೂಕಿನ ತಹಶೀಲ್ದಾರ್ ವೈ.ಎಸ್.ಸೋಮನಕಟ್ಟಿ ಅವರಿಗೆ ವಿವೇಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಈ ವೇಳೆ ಮರೇಗುದ್ದಿ ಅಡವಿ ಸಿದ್ದೇಶ್ಚರಮಠದ ನಿರುಪಾಧೀಶ್ವರ ಮಹಾಸ್ವಾಮಿಗಳು, ಮಾಜಿ ಸಚಿವ ಎಸ್.ಆರ್.ಪಾಟೀಲ, ಜಮಾತೆ ಇಸ್ಲಾಮಿಕ್ ಹಿಂದ್ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ, ಸಿಪಿಐ ಎಚ್.ಬಿ.ಸಣಮನಿ ಹಾಜರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.