ತಾಳಿಕೋಟೆ: ಇಲ್ಲಿನ ಗುಡ್ನಾಳ -ದೇವರ ಹುಲಗಬಾಳ ಬಳಿ ಬುಧವಾರ ಜಮೀನಿನಿಂದ ರಸ್ತೆಗೆ ಬರುತ್ತಿದ್ದ ಜೀಪ್ ಬೈಕ್‌ಗೆ ಡಿಕ್ಕಿಯಾಗಿ ಮಿಣಜಗಿ ಗ್ರಾಮದ ಪವಿತ್ರಾ ಪ್ರಕಾಶ ಬಿರಾದಾರ(ಬಳಗಾನೂರ)(35) ಮೃತಪಟ್ಟಿದ್ದಾರೆ.
ಮುದ್ದೇಬಿಹಾಳದಿಂದ ಸಂಬಂಧಿಕರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮರಳಿ ಮಿಣಜಿಗಿ ಗ್ರಾಮಕ್ಕೆ ಬರುತ್ತಿದ್ದಾಗ ಬೈಕ್‌ಗೆ ಜೀಪ್ ಡಿಕ್ಕಿಯಾಗಿದ್ದು, ಬೈಕ್ ಮೇಲಿದ್ದ ಪವಿತ್ರಾ ಬಿದ್ದು ತಲೆಗೆ ತೀವ್ರ ಪೆಟ್ಟಾಗಿತ್ತು. ತಾಳಿಕೋಟೆ ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷಯ ತಿಳಿದು ತಾಳಿಕೋಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಮೃತ ಮಹಿಳೆಯ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಮೃತರಿಗೆ ಪತಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ಗುರುವಾರ ಸ್ವಗ್ರಾಮ ಮಿಣಜಗಿಯಲ್ಲಿ ನೆರವೇರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.