ADVERTISEMENT

ಶಿಕ್ಷಕರ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 20 ಮೇ 2022, 15:40 IST
Last Updated 20 ಮೇ 2022, 15:40 IST

ವಿಜಯಪುರ: ಮೇ 21 ಮತ್ತು ಮೇ 22ರಂದು ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8ನೇ ತರಗತಿ) ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ವಿಜಯಪುರದ 16 ಪರೀಕ್ಷಾ ಕೇಂದ್ರಗಳಲ್ಲಿ 4330 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಈ ಪರೀಕ್ಷೆಗಳು ನಡೆಯುವ ವೇಳೆ ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ವ್ಯಾಪ್ತಿಯೊಳಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾರ್ಥಿಗಳಿಗೆ ಮೊಬೈಲ್, ಕ್ಯಾಲ್ಯೂಕ್ಲೀಟರ್, ಎಲೆಕ್ಟ್ರಾನಿಕ್ಸ್ ವಾಚ್, ಮೈಕ್ರೋ ಫೋನ್, ಬ್ಲೂ ಟೂತ್ ಹಾಗೂ ಇತರೆ ಎಲ್ಲಾ ಎಲೆಕ್ಟ್ರಾನಿಕ ಉಪಕರಣಗಳನ್ನು ತರುವುದು ನಿಷೇಧಿಸಲಾಗಿದೆ.

ADVERTISEMENT

ಯಾವುದೇ ರೀತಿಯಾದ ಕೈ ಗಡಿಯಾರಗಳಿಗೆ ಅನುಮತಿ ಇರುವುದಿಲ್ಲ. ಪ್ರತಿ ಕೊಠಡಿಯಲ್ಲೂ ಸಮಯ ಪಾಲನೆಗಾಗಿ ಗೋಡೆ ಗಡಿಯಾರಗಳನ್ನು ಅಳವಡಿಸಲಾಗಿದೆ. ಜಾಮಿಟಿ ಬಾಕ್ಸ್ ಇದ್ದಲ್ಲಿ ಕಡ್ಡಾಯವಾಗಿ ತಪಾಸಣೆಗೊಳಪಡಿಸಿ, ರೇಖಾ ಗಣಿತ ಪರಿಕರಗಳನ್ನು ಮಾತ್ರ ಅನುಮತಿ ನೀಡಲಾಗುವುದು.

ಈ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್‌ ಅಂಗಡಿಗಳು, ಕಂಪ್ಯೂಟರ್‌ ಸೆಂಟರ್‌, ಸೈಬರ್ ಕೆಫೆ, ಕೋಚಿಂಗ್ ಕೇಂದ್ರಗಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.