ಅರ್ಜಿ ಆಹ್ವಾನ
ವಿಜಯಪುರ: ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜೂನ್ 15ರಿಂದ 17 ರವರೆಗೆ ವಿಜಯಪುರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಪರೀಕ್ಷೆ ಮುಗಿಯುವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಟಿ. ಭೂಬಾಲನ್ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ, ಸಿಬ್ಬಂದಿ ಮತ್ತು ಇತರರು ಮೊಬೈಲ್ ಫೋನ್ ತರುವುದು ಹಾಗೂ ಬಳಸುವುದುನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷಾ ಸಮಯದಲ್ಲಿ ತೆರೆಯದಂತೆ ಆದೇಶಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.