ADVERTISEMENT

Teachers' Day | ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ರಮೇಶ ಜಿಗಜಿಣಗಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 5:46 IST
Last Updated 6 ಸೆಪ್ಟೆಂಬರ್ 2025, 5:46 IST
ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ 2025-26ನೇ ಸಾಲಿನ  ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು
ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ 2025-26ನೇ ಸಾಲಿನ  ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು   

ವಿಜಯಪುರ: ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ  ಮಹತ್ವದ್ದಾಗಿದ್ದು, ಶಿಕ್ಷಕರಿಗೆ ಸಮಾಜದಲ್ಲಿ ಬಹಳ ಗೌರವದ ಸ್ಥಾನವಿದ್ದು, ಶಿಕ್ಷಕರು ನಿರ್ವಹಿಸುವ ಕಾರ್ಯ ಅನನ್ಯವಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಗೆ ಪೂರಕವಾಗಿ ಪಾಠ ಬೊಧನೆ ಮಾಡುವ ಮೂಲಕ ಮುಂದಿನ ಉತ್ತಮ ನಾಗರಿಕರನ್ನಾಗಿ ರೂಪಿಸುವ ಬಹು ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ADVERTISEMENT

ಶಾಸಕ ವಿಠಲ ಕಟಕಧೋಂಡ ಮಾತನಾಡಿ, ಜಿಲ್ಲೆಯ ಶೈಕ್ಷಣಿಕ ಫಲಿತಾಂಶ ಸುಧಾರಣೆಗೆ ಶಿಕ್ಷಕರು ಶ್ರಮಿಸುವಂತೆ ಹೇಳಿದರು.

ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ, ಮಕ್ಕಳ ಬದುಕನ್ನು ಬಂಗಾರವಾಗಿಸುವ ಕಾರ್ಯ ಮಾಡಿ ಮಕ್ಕಳ ಸರ್ವೊತೋಮುಖ ಏಳಿಗೆಗಾಗಿ ಶ್ರಮಿಸಿ ಎಂದರು. 

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ,ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಸೇಡಶ್ಯಾಳ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೀರಯ್ಯ ವಿ.ಸಾಲಿಮಠ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕರಾದ  ಉಮಾದೇವಿ ಸೊನ್ನದ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ವಿಜಯಪುರ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜೆ ಬಿರಾದಾರ ಉಪಸ್ಥಿತರಿದ್ದರು. 

ಕಲ್ಲಿನ ಮೂರ್ತಿಯನ್ನು ಶಿಲೆಯನ್ನಾಗಿಸುವಂತೆ ಅಮೂರ್ತ ರೂಪದ ಮಕ್ಕಳನ್ನು ಮೂರ್ತರೂಪ ಕೊಡುವ ಮಕ್ಕಳ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ 
-ರಮೇಶ ಜಿಗಜಿಣಗಿಸಂಸದ 
ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ 
2025-26ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.   ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಎ.ಎ. ಜಮಾದಾರ ಗುರಣ್ಣ ಬಿರಾದಾರ  ಡಿ.ಎನ್.ಕುರೇಶಿ ತಬ್ಬಸ್ಸುಂಬೇಗಂ ಮೈನುದ್ದೀನಸಾಹೇಬ ಸೌದಿ ಎಸ್.ಬಿ.ಗೊಂಗಡಿ ರಾಚಪ್ಪ ವಪ್ಪಾರಿ ಹಾಗೂ ರಾಜೇಶ ಪಾಟೀಲ ಅವರನ್ನು ಗೌರವಿಸಲಾಯಿತು.  ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಿದರಾಯ ಆಕಳವಾಡಿ ಚಂದ್ರಕಾಂತ  ಕನಸೆ ಫರೀದಾ ಎಸ್. ಬಾಗವಾನ ಅಕ್ಬರ್ ಎಸ್. ಬಡಿಗೇರ  ಪರಶುರಾಮ ಬೆನಕನಹಳ್ಳಿ ರಾಜಕುಮಾರ್ ಮಾಳಿ  ಭಾರತಿ ವಿ. ಗೊಂಗಡಿ ಅವರನ್ನು ಗೌರವಿಸಲಾಯಿತು. ಫ್ರೌಢಶಾಲಾ ವಿಭಾಗದಲ್ಲಿ ಸಂಗಮೇಶ ಬಂಡೆ  ಸಂತೋಷ  ಜೇವರ್ಗಿ ರಾಜೇಶ ಬಂಡಿ ಕೃಷ್ಣಪ್ಪ  ಗಾಡಿವಡ್ಡರ  ಎಸ್.ಬಿ. ಅವಟಿ  ಭೀಮಗೊಂಡ ಕೋಟ್ಯಾಳ ಹಾಗೂ ಪ್ರಭುಗೌಡ ರಾರಡ್ಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.