ADVERTISEMENT

ವಿಜಯಪುರ: ಟಿಇಟಿ ಪರೀಕ್ಷೆ ಸುಸೂತ್ರ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 5:10 IST
Last Updated 8 ಡಿಸೆಂಬರ್ 2025, 5:10 IST
ವಿಜಯಪುರ ನಗರದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭಾನುವಾರ ಟಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
ವಿಜಯಪುರ ನಗರದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭಾನುವಾರ ಟಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ವಿಜಯಪುರ: ಶಿಕ್ಷಕರ ಅರ್ಹತಾ (ಟಿಇಟಿ-2025) ಪರೀಕ್ಷೆಗಳು ವಿಜಯಪುರ ನಗರದ 64 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಸುಸೂತ್ರವಾಗಿ ನಡೆಯಿತು.  

ಜಿಲ್ಲಾಧಿಕಾರಿ ಡಾ.ಆನಂದ.ಕೆ ನಗರದ ಮರಾಠಿ ವಿದ್ಯಾಲಯ ಹಾಗೂ ಅಂಜುಮನ್ ಬಾಲಕಿಯರ ಪದವಿ- ಪೂರ್ವ ಕಾಲೇಜಿನಲ್ಲಿ ನಡೆದ ಟಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆ, ಪರೀಕ್ಷೆ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಮೂಲ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿ, ವಿದ್ಯಾರ್ಥಿಗಳಿಗೆ ಆಸನಗಳ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಿರುವ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.

ADVERTISEMENT

ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಿಬ್ಬಂದಿ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.