ADVERTISEMENT

ಸಾಂಸ್ಕೃತಿಕ, ನೈತಿಕ ಮೌಲ್ಯಗಳ ಕುಸಿತ: ವಿಷಾದ

​ಪ್ರಜಾವಾಣಿ ವಾರ್ತೆ
Published 13 ಮೇ 2022, 12:58 IST
Last Updated 13 ಮೇ 2022, 12:58 IST
ವಿಜಯಪುರ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿಎಐಡಿಎಸ್‌ಒ ಸಂಯೋಜಿತ ಸೃಜನ ಸಾಂಸ್ಕೃತಿಕ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡಿದ್ದ ಮಕ್ಕಳು
ವಿಜಯಪುರ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿಎಐಡಿಎಸ್‌ಒ ಸಂಯೋಜಿತ ಸೃಜನ ಸಾಂಸ್ಕೃತಿಕ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡಿದ್ದ ಮಕ್ಕಳು   

ವಿಜಯಪುರ: ಇಂದು ದೇಶವು ಸಾಂಸ್ಕೃತಿಕ, ನೈತಿಕ ಮೌಲ್ಯಗಳ ಕುಸಿತವನ್ನು ಕಾಣುತ್ತಿದ್ದು ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಹಿರಿಯ ಸಾಹಿತಿಗಳಾದ ಸುಭಾಶ್‌ ಯಾದವಾಡ ಹೇಳಿದರು.

ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿಎಐಡಿಎಸ್‌ಒ ಸಂಯೋಜಿತ ಸೃಜನ ಸಾಂಸ್ಕೃತಿಕ ವೇದಿಕೆ ವತಿಯಿಂದಹಮ್ಮಿಕೊಂಡಿದ್ದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಅವರು ಮಾತನಾಡಿದರು.

ಒಳ್ಳೆಯ ಸಂಸ್ಕೃತಿ ಉಳಿಸಿಕೊಂಡು ಉನ್ನತ ಚರಿತ್ರೆ ಗಳಿಸಿಕೊಳ್ಳಬೇಕಾದ ವಿದ್ಯಾರ್ಥಿಗಳು ಇಂದು ಅಶ್ಲೀಲ ಸಿನಿಮಾ ಸಾಹಿತ್ಯ ಸೇರಿದಂತೆ ಹಲವು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ.ಇದಕ್ಕೆ ಕಡಿವಾಣ ಹಾಕುವುದರ ಬದಲಿಗೆ ಈಗಿನ ಸಮಾಜದಲ್ಲಿ ಹೆಚ್ಚು ಪ್ರೋತ್ಸಾಹವನ್ನು ನೀಡಲಾಗುತ್ತಿರುವುದು ವಿಷಾದನೀಯ ಎಂದರು.

ADVERTISEMENT

ವಿದ್ಯಾರ್ಥಿಗಳ ನಡುವೆ ಒಳ್ಳೆಯ ಸಾಂಸ್ಕೃತಿಕ ಮೌಲ್ಯಗಳನ್ನು ಬಿತ್ತಲು ನಾಯಕರಾದ ಈಶ್ವರಚಂದ್ರ ವಿದ್ಯಾಸಾಗರ, ಜ್ಯೋತಿಬಾ ಫುಲೆ, ಸಾವಿತ್ರಿ ಬಾಫುಲೆ ಹಾಗೂ ಸ್ವತಂತ್ರ ಹೋರಾಟಗಾರ ಭಗತ್ ಸಿಂಗ್, ನೇತಾಜಿ ಸುಭಾಷ್‌ ಚಂದ್ರ ಬೋಸ್ ಅವರಂತಹ ಮಹಾನ್ ವ್ಯಕ್ತಿಗಳ ವಿಚಾರವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವ ಅವಶ್ಯಕತೆ ಇದೆ ಎಂದರು.

ಪರಶುರಾಮ ಇಂಚಿಗೇರಿ ಅವರು ಚಿತ್ರಕಲೆ, ಅರ್ಪಿತಾ ಅವರು ಕಸೂತಿ ಮತ್ತು ಸ್ನೇಹಾ ಕಟ್ಟಿಮನಿ ಅವರು ನೇತಾಜಿ ಸುಭಾಶ್‌ ಚಂದ್ರ ಬೋಸ್ ಅವರ ಕಥೆಯನ್ನು ಮಕ್ಕಳಿಗೆ ತಿಳಿಸಿಕೊಟ್ಟರು.

ಎಐಡಿಎಸ್ಓ ಜಿಲ್ಲಾ ಅಧ್ಯಕ್ಷೆ ಸುರೇಖಾ ಕಡಪಟ್ಟಿ, ಜಿಲ್ಲಾ ಉಪಾಧ್ಯಕ್ಷ ರೆಹಮಾನ್, ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ, ಜಂಟಿ ಕಾರ್ಯದರ್ಶಿ ದೀಪಾ, ಸದಾಶಿವ ಮತ್ತಿತ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.