ತಾಳಿಕೋಟೆ: ‘ಕರ್ನಾಟಕದಲ್ಲಿ 130 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸುವ ಯೋಚನೆ ಸರ್ಕಾರದ ಮುಂದಿದೆ’ ಎಂದು ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರೂ ಆದ ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರ ಆವರಣದಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು.
‘ಬಡ ಕೂಲಿ ಕಾರ್ಮಿಕರು, ದಿನಗೂಲಿ ನೌಕರರ ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಊಟ, ಉಪಾಹಾರ ಒದಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಿದೆ. ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯ ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಹೇಳಿದರು.
ತಹಶೀಲ್ದಾರ್ ವಿನಯಾ ಹೂಗಾರ, ಪುರಸಭೆ ಅಧ್ಯಕ್ಷೆ ಜುಬೇದಾಬೇಗಂ ಹು ಜಮಾದಾರ, ಉಪಾಧ್ಯಕ್ಷೆ ಗೌರಮ್ಮ ಕುಂಬಾರ, ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ, ಸದಸ್ಯರಾದ ಅಕ್ಕಮಹಾದೇವಿ ಕಟ್ಟಿಮನಿ, ಪರಶುರಾಮ್ ತಂಗಡಗಿ, ಅಣ್ಣಪ್ಪ ಜಗತಾಪ, ಮುದುಕಪ್ಪ ಬಡಿಗೇರ, ಮುಖಂಡರಾದ ವಿ.ಸಿ. ಹಿರೇಮಠ, ಎಂ.ಜಿ. ಪಾಟೀಲ, ಸಿದ್ದನಗೌಡ ಪಾಟೀಲ, ಪ್ರಭುಗೌಡ ಮದರಕಲ್ಲಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.