ADVERTISEMENT

ಆಲಮಟ್ಟಿ ಜಲಾಶಯದ ಒಳಹರಿವು 1.18 ಲಕ್ಷ ಕ್ಯುಸೆಕ್

​ಪ್ರಜಾವಾಣಿ ವಾರ್ತೆ
Published 22 ಜುಲೈ 2023, 14:32 IST
Last Updated 22 ಜುಲೈ 2023, 14:32 IST
ಆಲಮಟ್ಟಿ ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಘಟಕದ ಮೂಲಕ ಕೃಷ್ಣಾ ನದಿಗೆ ನೀರು ಬಿಡುತ್ತಿರುವ ದೃಶ್ಯ
ಆಲಮಟ್ಟಿ ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಘಟಕದ ಮೂಲಕ ಕೃಷ್ಣಾ ನದಿಗೆ ನೀರು ಬಿಡುತ್ತಿರುವ ದೃಶ್ಯ   

ಆಲಮಟ್ಟಿ: ಆಲಮಟ್ಟಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಅಬ್ಬರ ಶನಿವಾರವೂ ಮುಂದುವರಿದಿದೆ. ಸಂಜೆಯ ವೇಳೆಗೆ ಒಳಹರಿವು 1,18,916 ಕ್ಯುಸೆಕ್ ನೀರಿಗೆ ಏರಿಕೆಯಾಗಿದೆ.

ಶನಿವಾರ ಜಲಾಶಯಕ್ಕೆ ಒಂದೇ ದಿನ 83,945 ಕ್ಯುಸೆಕ್ ನೀರು (7,25 ಟಿಎಂಸಿ ಅಡಿ) ಹರಿದು ಬಂದಿದೆ. ಜಲಾಶಯದ ಹೊರಹರಿವನ್ನು ಶನಿವಾರ ಮಧ್ಯಾಹ್ನದಿಂದ 6000 ಕ್ಯುಸೆಕ್‌ಗೆ ಹೆಚ್ಚಿಸಲಾಗಿದೆ. ಇದರಿಂದಾಗಿ ಆಲಮಟ್ಟಿ ವಿದ್ಯುತ್ ಉತ್ಪಾದನಾ ಘಟಕದ ಆರು ಘಟಕಗಳ ಪೈಕಿ 55 ಮೆಗಾವಾಟ್ ಸಾಮರ್ಥ್ಯದ ಎರಡು ಘಟಕಗಳನ್ನು ಆರಂಭಿಸಲಾಗಿದೆ. ಅದರ ಮೂಲಕ 50 ಮೆಗಾ ವಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ ಎಂದು ಕೆಪಿಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಭರ್ತಿಯ ಆತಂಕ ದೂರ: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ವಾರ ಆಲಮಟ್ಟಿ ಜಲಾಶಯ ಭರ್ತಿಯಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿತ್ತು. ಆದರೆ ಈಗ ಸತತ ಒಳಹರಿವು ಹೆಚ್ಚಳವಾಗಿದ್ದರಿಂದ ಕಳೆದ ವಾರ ಜಲಾಶಯ ಭರ್ತಿಯ ಬಗ್ಗೆ ಇದ್ದ ಆತಂಕ ಈಗ ಸರಿದಿದೆ. ಕುಡಿಯುವ ನೀರಿಗಾಗಿ, ಕೆರೆಗಳ ಭರ್ತಿಗಾಗಿ ಬಿಡಲು ನಿರ್ಧರಿಸಿದ ನೀರನ್ನು ಕಾಲುವೆಗಳ ಮೂಲಕ ಹರಿಸುವುದನ್ನು ಆರಂಭಿಸಲಾಗಿದೆ.

ADVERTISEMENT

ಹೊರಹರಿವು ಆರಂಭಿಸಿದ್ದರಿಂದ ಬತ್ತಿದ್ದ ಆಲಮಟ್ಟಿ ಜಲಾಶಯದ ಮುಂಭಾಗದ ಕೃಷ್ಣಾ ನದಿ ತಳಪಾತ್ರಕ್ಕೆ ಜೀವ ಕಳೆ ಬಂದಿದೆ.

ಆಲಮಟ್ಟಿ ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಘಟಕದ ಮೂಲಕ ಕೃಷ್ಣಾ ನದಿಗೆ ನೀರು ಬಿಡುತ್ತಿರುವ ದೃಶ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.