ADVERTISEMENT

ವಿಜಯಪುರ: ಕರ್ನಾಟಕ ಬಂದ್ ಸಂಪೂರ್ಣ ವಿಫಲ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 8:04 IST
Last Updated 5 ಡಿಸೆಂಬರ್ 2020, 8:04 IST
ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದ ಅಂಬೇಡ್ಕರ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದ ಅಂಬೇಡ್ಕರ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.    

ವಿಜಯಪುರ: ಕರ್ನಾಟಕ ಬಂದ್ ಸಂಪೂರ್ಣ ವಿಫಲವಾಯಿತು. ಎಂದಿನಂತೆ ವ್ಯಾಪಾರ, ವಹಿವಾಟು ನಡೆಯಿತು.

ವಾಹನಗಳ ಸಂಚಾರವೂ ಎಂದಿನಂತೆ ಇತ್ತು. ಅಂಗಡಿ, ಮಳಿಗೆಗಳು ಬಾಗಿಲು ತೆರೆದಿದ್ದವು. ಜನ ಸಂಚಾರವೂ ಎಂದಿನಂತೆ ಇತ್ತು. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಮತ್ತು ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ನಗರದ ಅಂಬೇಡ್ಕರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತ್ಯೇಕ ವಾಗಿ ಪ್ರತಿಭಟನೆ ನಡೆಸಿದರು.

ಮರಾಠಾ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು‌ ನಿಗಮವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಬಂದ್ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ವಿಜಯಪುರದಲ್ಲಿ ಕನ್ನಡ ಸಂಘಟನೆಗಳು ಹೇಗೆ ಬಂದ್ ನಡೆಸುತ್ತಾರೆ ನೋಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ದಮಕಿ ಹಾಕಿದ್ದರು. ಅಲ್ಲದೇ, ಕರವೇ ಎಂದರೆ ಕಳ್ಳರ ರಕ್ಷಣಾ ಕೂಟ ಎಂದು ಟೀಕಿಸಿದ್ದರು. ನಗರದ ವ್ಯಾಪಾರಸ್ಥರು, ಹಿಂದೂ ಸಂಘಟನೆಗಳ ಮುಖಂಡರ ಸಭೆ ನಡೆಸಿ, ಬಂದ್ ವಿಫಲಗೊಳಿಸಲು ಕರೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.