ADVERTISEMENT

ಶಿಕ್ಷಣದಿಂದ ಸಮಾಜದ ಏಳಿಗೆ: ಸುನಂದಮ್ಮ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 13:07 IST
Last Updated 6 ಸೆಪ್ಟೆಂಬರ್ 2021, 13:07 IST
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ಅಧ್ಯಯನ ವಿಭಾಗದಲ್ಲಿ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ನಾಗರಿಕ ಪೌರತ್ವ ತರಬೇತಿ ಶಿಬಿರವನ್ನು ಮಹಿಳಾ ವಿವಿಯ ಕುಲಸಚಿವೆ ಪ್ರೊ.ಆರ್.ಸುನಂದಮ್ಮ ಉದ್ಘಾಟಿಸಿದರು 
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ಅಧ್ಯಯನ ವಿಭಾಗದಲ್ಲಿ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ನಾಗರಿಕ ಪೌರತ್ವ ತರಬೇತಿ ಶಿಬಿರವನ್ನು ಮಹಿಳಾ ವಿವಿಯ ಕುಲಸಚಿವೆ ಪ್ರೊ.ಆರ್.ಸುನಂದಮ್ಮ ಉದ್ಘಾಟಿಸಿದರು    

ವಿಜಯಪುರ: ‘ಸಮಾಜದಿಂದ ಶಿಕ್ಷಣವನ್ನು ಪಡೆಯುವ ನಾವು, ಅದನ್ನು ಸರಿಯಾದ ಮಾರ್ಗದಲ್ಲಿ ಸ್ವೀಕರಿಸಿ, ಬೆಳೆದು ಅದನ್ನು ಮೌಲ್ಯವಾಗಿ ಪರಿಗಣಿಸಿ ಸಮಾಜಕ್ಕೆ ಮರಳಿ ನೀಡುವ ಗುಣ ಬೆಳೆಸಿಕೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವೆ ಪ್ರೊ.ಆರ್.ಸುನಂದಮ್ಮ ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ಅಧ್ಯಯನ ವಿಭಾಗದಲ್ಲಿ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ನಾಗರಿಕ ಪೌರತ್ವ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ಹಿಂಸೆ, ರೋಗ ರುಜಿನಗಳಿಗೆ ಮಾನವನ ಚಟುವಟಿಕೆಗಳೆ ಕಾರಣ. ಅದನ್ನು ಸರಿಪಡಿಸುವ, ಸುಸ್ಥಿತವಾಗಿಸುವ ಕೆಲಸವು ನಮ್ಮಿಂದಲೆ ನಡೆಯಬೇಕಾಗಿದೆ’ ಎಂದರು.

ADVERTISEMENT

‘ಪೌರತ್ವ ಶಿಬಿರಗಳು ಶಿಕ್ಷಕ ತರಬೇತಿಗೆ ಬೇಕಾದ ಮೌಲ್ಯಗಳನ್ನು ತಿಳಿಸಿಕೊಡಲು ಸಹಕಾರಿ. ಪ್ರಸ್ತುತ ಪೌರತ್ವ ಶಿಬಿರದಲ್ಲಿ ಹಮ್ಮಿಕೊಂಡಿರುವ ಉಪನ್ಯಾಸಗಳು ಮತ್ತು ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ’ ಎಂದು ಹೇಳಿದರು.

‘ಮಹಿಳಾ ಪ್ರಶಿಕ್ಷಣಾರ್ಥಿಗಳು ಆತ್ಮವಿಶ್ವಾಸದಿಂದ ತರಬೇತಿ ಪಡೆದು ಶಾಲೆಗಳಲ್ಲಿ ಕರ್ತವ್ಯ ನಿಷ್ಠೆಯಿಂದ ಕಾರ್ಯಮಾಡಿ’ ಎಂದು ಸಲಹೆ ನೀಡಿದರು.

ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ವೆಂಕೋಬ ನಾರಾಯಣಪ್ಪ, ‘ತರಬೇತಿ ಶಿಬಿರ ವ್ಯಕ್ತತ್ವ ನಿರ್ಮಾಣಕ್ಕೆ ಪೂರಕವಾಗಿದೆ’ ಎಂದರು.

ಪೌರತ್ವ ತರಬೇತಿ ಶಿಬಿರದ ಸಂಯೋಜಕ ಡಾ.ಯು.ಕೆ.ಕುಲಕರ್ಣಿ, ಡಾ.ವಿಷ್ಣು.ಎಂ.ಶಿಂದೆ, ಡಾ.ಅಶೋಕಕುಮಾರ ಸುರಪುರ, ಡಾ.ಜಿ. ಸೌಭಾಗ್ಯ, ಡಾ.ಪ್ರಕಾಶ ಸಣ್ಣಕ್ಕನವರ, ಡಾ.ಭಾರತಿ ಗಾಣೀಗೆರ ಹಾಗೂ ಡಾ.ಪ್ರಕಾಶ ಬಡಿಗೇರ,ನಫಿಸಾಬಾನು, ಪೂಜಾ ಸಾಗರ, ಆರತಿ ಕಾಂಬಳೆ ಪಾಲ್ಗೊಂಡಿದ್ದರು. ವಿದ್ಯಾರ್ಥಿನಿಯರಿಂದ ಸರ್ವಧರ್ಮ ಪಠಣ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.