ADVERTISEMENT

ಜಗತ್ತಿಗೆ ಜ್ಞಾನದ ಬೆಳಕು ನೀಡಿದ ದಾರ್ಶನಿಕ

ವಾಲ್ಮೀಕಿ ಜಯಂತಿಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಶ್ಲಾಘನೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 13:34 IST
Last Updated 31 ಅಕ್ಟೋಬರ್ 2020, 13:34 IST
ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಆಚರಿಸಲಾದ ವಾಲ್ಮೀಕಿ ಜಯಂತಿಯಲ್ಲಿ  ಗಣ್ಯರು ಹಾಗೂ ಮುಖಂಡರು ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು 
ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಆಚರಿಸಲಾದ ವಾಲ್ಮೀಕಿ ಜಯಂತಿಯಲ್ಲಿ  ಗಣ್ಯರು ಹಾಗೂ ಮುಖಂಡರು ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು    

ವಿಜಯಪುರ:ಜಾತಿ, ಮತ ಮೀರಿದ ಮಾನವೀಯ ಕವಿ ಮಹರ್ಷಿ ವಾಲ್ಮೀಕಿ ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಶ್ರೇಷ್ಠ ದಾರ್ಶನಿಕ ಎಂದುಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದಿಂದ ವಾಲ್ಮೀಕಿ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಕೂಡ ವಾಲ್ಮೀಕಿ ರಾಮಾಯಣ ಓದುವ ಮೂಲಕ ಜೀವನದಲ್ಲಿ ಮೌಲ್ಯ, ಸಂಸ್ಕಾರಗಳನ್ನು ಅಳವಡಿಸಿಕೊಳ್ಳಬೇಕಿದೆ. ವಾಲ್ಮೀಕಿ ವ್ಯಕ್ತಿತ್ವ, ಚರಿತ್ರೆ ತಿಳಿದುಕೊಳ್ಳಬೇಕಿದೆ ಎಂದು ಹೇಳಿದರು.

ADVERTISEMENT

ಸತ್ಪುರುಷರು, ಮಹಾತ್ಮರು ಸದಾಕಾಲವೂ ಸ್ಮರಣೀಯರಾಗಿದ್ದು, ಇವರ ತತ್ವ, ಆದರ್ಶಗಳ ಬೆಳಕಿನಲ್ಲಿ ನವ ಸಮಾಜ ನಿರ್ಮಾಣಕ್ಕೆ ಯುವ ಸಮೂಹ ಸಂಕಲ್ಪಿಸಬೇಕಿದೆ ಎಂದು ಹೇಳಿದರು.

ಮಹಿರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಗಣ್ಯರು ಹಾಗೂ ಮುಖಂಡರು ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಸಮಾಜದ ಮುಖಂಡರಾದ ರವಿ ಬಿಸನಾಳ, ಮಲ್ಲಪ್ಪ ಕೌಲಗಿ, ಮರಳಸಿದ್ಧ ನಾಯ್ಕೋಡಿ, ಚಂದ್ರು ನಾಟಿಕಾರ, ಸದಾಶಿವ ಕನ್ನೂರ, ಕೆ.ಎಚ್ ಸಂದಿಮನಿ, ಕಾಳಪ್ಪ ಕಿರಸೂರ, ದುಂಡಪ್ಪ, ಬಿ.ಎಚ್ ನಾಡಿಗೇರ, ಸಮಾಜ ಕಲ್ಯಾಣ ಅಧಿಕಾರಿ ರಾಮನಗೌಡ ಕನ್ನೊಳ್ಳಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ಅಡಿವೆಪ್ಪ ಸಾಲಗಲ್, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.