ಮುದ್ದೇಬಿಹಾಳ: ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮಿಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ‘ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ’ ಎಂದರು.
ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಪ್ರಥಮ ದರ್ಜೆ ಗುತ್ತಿಗೆದಾರ ರಾಜು ರಾಠೋಡ ಬಹುಮಾನ ವಿತರಿಸಿದರು
ಗ್ರಾಮ ಪಂಚಾಯಿತಿ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ ಜಾಧವ, ಗುಂಡು ಚವ್ಹಾಣ, ಖೂಬಣ್ಣ ಚವ್ಹಾಣ, ಶಿವಾನಂದ ರಾಠೋಡ, ಥಾವರಪ್ಪ ರಾಠೋಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.