
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ವಿಜಯಪುರ: ತಾಲ್ಲೂಕಿನ ಮಿಂಚನಾಳ ತಾಂಡಾದ ಮಾದೇವ ನಗರದಲ್ಲಿ ಗುರುವಾರ ಸಂಜೆ ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಸಾವಿಗೀಡಾಗಿದ್ದಾರೆ.
ಶಿವಮ್ಮ ರಾಜೂ ರಾಠೋಡ(8), ಕಾರ್ತಿಕ ವಿಶ್ವ ರಾಠೋಡ (7) ಹಾಗೂ ಸ್ವಪ್ನಾ ರಾಜೂ ರಾಠೋಡ್ (12) ಸಾವಿಗೀಡಾದ ಮಕ್ಕಳು ಎಂದು ಗುರುತಿಸಲಾಗಿದೆ.
ಕುರಿಗಳ ಜೊತೆಗೆ ಆಟವಾಡುತ್ತಾ ತೆರಳಿದ್ದ ಮಕ್ಕಳು ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ವಿಜಯಪುರ ತಹಶೀಲ್ದಾರ ಚೆನಗೊಂಡ ಹಾಗೂ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.