ADVERTISEMENT

ವಿಜಯಪುರ: ವಕ ಸೇರಿದಂತೆ ಕೋವಿಡ್‌ಗೆ ಮೂರು ಸಾವು

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 17:00 IST
Last Updated 19 ಆಗಸ್ಟ್ 2020, 17:00 IST

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಮೂವರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ ಎಂದುಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್‌ ತಿಳಿಸಿದ್ದಾರೆ.

ಕೋವಿಡ್ ಸೋಂಕಿತ 63 ವರ್ಷ ವಯೋಮಾನದ (ಪಿ35214) ವ್ಯಕ್ತಿ ತೀವ್ರ ಉಸಿರಾಟ ತೊಂದರೆಯಿಂದ ಬಳಲಿ ಜುಲೈ 8ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜುಲೈ 28ರಂದು ಮೃತಪಟ್ಟಿದ್ದಾರೆ.

ಕೋವಿಡ್‌ ಪೀಡಿತ 40ವರ್ಷ ವಯೋಮಾನದ ವ್ಯಕ್ತಿ(ಪಿ100916) ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ತೊಂದರೆ, ಕೆಮ್ಮು, ಸಕ್ಕರೆ ಕಾಯಿಲೆಗಳಿಂದ ಬಳಲಿ, ಜುಲೈ 22ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್‌ 1ರಂದು ಮೃತಪಟ್ಟಿದ್ದಾರೆ.

ADVERTISEMENT

20 ವರ್ಷ ವಯಸ್ಸಿನ ಯುವಕ(ಪಿ216876) ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಕೆಮ್ಮು, ಜ್ವರದಿಂದ ಬಳಲಿ, ಆಗಸ್ಟ್‌ 17ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.