ADVERTISEMENT

ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ: ವೈದ್ಯಾಧಿಕಾರಿ ಡಾ.ರಾಜೇಶ

​ಪ್ರಜಾವಾಣಿ ವಾರ್ತೆ
Published 1 ಜೂನ್ 2023, 11:34 IST
Last Updated 1 ಜೂನ್ 2023, 11:34 IST
ಇಂಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಬುಧವಾರ ನಡೆದ ವಿಶ್ವ ತಂಬಾಕು ನಿಷೇಧ ದಿನಾಚರಣೆಯಲ್ಲಿ ಡಾ.ರಾಜೇಶ ಕೋಳೆಕರ ಮಾತನಾಡಿದರು
ಇಂಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಬುಧವಾರ ನಡೆದ ವಿಶ್ವ ತಂಬಾಕು ನಿಷೇಧ ದಿನಾಚರಣೆಯಲ್ಲಿ ಡಾ.ರಾಜೇಶ ಕೋಳೆಕರ ಮಾತನಾಡಿದರು   

ಇಂಡಿ: ತಂಬಾಕು ಸೇವನೆಯಿಂದ ಕ್ಯಾನ್ಸರ್‌ನಂತಹ ಮಾರಕ ರೋಗಗಳು ಬರುತ್ತವೆ. ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರಕ ಎಂದು ಇಂಡಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಾಜೇಶ ಕೋಳೆಕರ ಹೇಳಿದರು.

ಇಂಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹಾಗೂ ಎನ್‌ಸಿಡಿ ಘಟಕ ಸಹಯೋಗದಲ್ಲಿ ಬುಧವಾರ ವಿಶ್ವ ತಂಬಾಕು ನಿಷೇಧ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು  ಮಾತನಾಡಿದರು.

ಡಾ.ಪ್ರೀತಿ ಕೋಳೆಕರ ಮಾತನಾಡಿ, ‘ಸಮಾಜಕ್ಕೆ ಮಾರಕವಾಗಿರುವ ತಂಬಾಕು ಸೇವನೆ ಬಗೆಗಿನ ಅಪಾಯಗಳ ಬಗ್ಗೆ ಜನ ಸಾಮಾನ್ಯರಲ್ಲಿ ಜಾಗೃತ ಮೂಡಿಸಬೇಕಿದೆ. ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕು’ ಎಂದರು.

ADVERTISEMENT

ಡಾ.ರಮೇಶ ರಾಠೋಡ ಮಾತನಾಡಿ, ‘ಯುವಕರು ಗುಟಕಾ, ಸಿಗರೇಟು ಎಂದು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ನಾಗರಿಕರ ಸಹಕಾರವೂ ಮುಖ್ಯ’ ಎಂದರು.

ಡಾ.ಎಸ್.ಎಸ್.ಮೇತ್ರಿ, ಕೆ.ಜಿ.ಶೀಲವಂತ ಮಾತನಾಡಿದರು.

ವೇದಿಕೆಯ ಮೇಲೆ ಎನ್‌ಸಿಡಿಎ ಸಿಬ್ಬಂದಿ ಮಲ್ಲಿಕಾರ್ಜುನ್‌ ಸಿಂಗೆ, ಬಸವರಾಜ ಅಹಿರಸಂಗ, ವಿದ್ಯಾಹಳಗುಣಕಿ, ವಿಜಯಲಕ್ಷ್ಮಿ ಕುಂಬಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.